ಅಭಿಪ್ರಾಯ / ಸಲಹೆಗಳು

ಮಾದಕವಸ್ತು ವಿರೋಧಿ ಅಭಿಯಾನ ಜಾಗೃತಿ ಮತ್ತು ಜಾಥಾ ಸುಳ್ಯ

  • ದಿನಾಂಕ 17.03.2022 ರಂದು ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಮೂಡಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಸುಳ್ಯದಲ್ಲಿ ಮಾದಕವಸ್ತು ವಿರೋಧಿ ಅಭಿಯಾನ ಜಾಗೃತಿ ಮತ್ತು ಜಾಥಾವನ್ನು ಆಯೋಜಿಸಲಾಗಿತ್ತು. ನಂತರ ಸುಳ್ಯ ತಾಲ್ಲೂಕು ನ್ಯಾಯಾಲಯದ ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಶ್ರೀ ಸೋಮಶೇಖರ್‌ ಎ ರವರು, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ಶ್ರೀ ಋಷಿಕೇಶ್ ಭಗವಾನ್ ಸೋನವಣೆ ಐ.ಪಿ.ಎಸ್ ರವರು ಜೆ.ಎಂ.ಎಂ.ಸಿ ಸುಳ್ಯ ಇದರ ಕಿರಿಯ ಸಿವಿಲ್‌ ನ್ಯಾಯಾಧೀಶರಾದ ಶ್ರೀ ಯಶವಂತ್‌ ಕುಮಾರ್‌, ಪುತ್ತೂರು ವಿಭಾಗದ ಸಹಾಯಕ ಆಯುಕ್ತರಾದ ಶ್ರೀಗಿರೀಶ್‌ ನಂದನ್‌, ಆಕಾಡೆಮಿ ಆಫ್‌ ಲಿಬರಲ್‌ ಎಜುಕೇಶನ್‌ ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ, ಸುಳ್ಯ ವೃತ್ತ ನಿರೀಕ್ಷಕರಾದ ನವೀನ್‌ ಚಂದ್ರ ಜೋಗಿ ರವರುಗಳ ಉಪಸ್ಥಿತಿಯಲ್ಲಿ ವಿಧ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ  ನಡೆಸಿ ERSS-112 ತುರ್ತು ಸೇವೆಗಳು, ಪೊಕ್ಸೋ ಪ್ರಕರಣ, ಸೈಬರ್ ಅಪರಾಧಗಳು ಸೇರಿದಂತೆ ಕಾನೂನಿನ ಹಲವು ವಿಷಯಗಳ ಬಗ್ಗೆ ಮಾಹಿತಿಗಳನ್ನು ನೀಡಲಾಯಿತು. ಇದರೊಂದಿಗೆ ಮಾದಕವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಮಾರ್ಗದರ್ಶನ ನೀಡಿ, ಅಂತಹ ದುಷ್ಚಟಗಳಿಗೆ ಒಳಗಾಗದಂತೆ ಪ್ರತಿಜ್ಙೆ ಸ್ವೀಕರಿಸುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪುತ್ತೂರು ಪೊಲೀಸ್‌ ಉಪವಿಭಾಗದ ಡಿವೈಎಸ್‌ಪಿ ಡಾ. ಗಾನಾ ಪಿ ಕುಮಾರ್‌ ಹಾಗೂ ಸೆನ್‌ ( ಸೈಬರ್‌, ಆರ್ಥಿಕ & ಮಾದಕವಸ್ತು) ಪೊಲೀಸ್‌ ಠಾಣೆಯ ನಿರೀಕ್ಷಕರಾದ ಸವಿತ್ರತೇಜ ರವರು ಹಾಜರಿದ್ದರು.

 

ವೀಕ್ಷಿಸಿ

ಇತ್ತೀಚಿನ ನವೀಕರಣ​ : 23-11-2022 03:44 PM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080