ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: 2

ಬಂಟ್ವಾಳ ಸಂಚಾರ ಪೊಲೀಸ್ ಠಾಣೆ: . ಪಿರ್ಯಾದಿದಾರರಾದ ಮೊಹಮ್ಮದ್ ಶರೀಫ್(40) ತಂದೆ: ಅಬ್ದುಲ್ ರಹಿಮಾನ್, ವಾಸ: ಗುಡ್ಡೆಯಂಗಡಿ ಮನೆ, ಪಾಣೆಮಂಗಳೂರು ಗ್ರಾಮ, ಬಂಟ್ವಾಳ ತಾಲೂಕು ರವರು ದಿನಾಂಕ: 19.05.2021 ರಂದು ತನ್ನ ತಂದೆಯಾದ ಅಬ್ದುಲ್ ರಹಿಮಾನ್ ಎಂಬವರೊಂದಿಗೆ ತನ್ನ ತಂಗಿಯ ಮನೆಗೆ ಹೋಗಿ ವಾಪಾಸು ಮನೆ ಕಡೆಗೆ ನಡೆದುಕೊಂಡು ಬರುತ್ತಾ ಬಂಟ್ವಾಳ ತಾಲೂಕು ಸಜಿಪ ಮುನ್ನೂರು ಗ್ರಾಮದ ಮಾರ್ನಬೈಲು ಗುಳಿಗನಕಟ್ಟೆ ಬಳಿ ತಲುಪಿದಾಗ ಮೇಲ್ಕಾರ್ ಕಡೆಯಿಂದ KA-19-ED-2155 ನೇ ಮೋಟಾರು ಸೈಕಲನ್ನು ಅದರ ಸವಾರ ಜೋಯಲ್ ಡಿ’ಕುನ್ಹ ರವರು ಅತೀ ವೇಗ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು  ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಿರ್ಯಾದಿದಾರರ ತಂದೆ ಅಬ್ದುಲ್ ರಹಿಮಾನ್ ರವರಿಗೆ ಡಿಕ್ಕಿ ಹೊಡೆದು ಅಪಘಾತ ಪಡಿಸಿದ ಪರಿಣಾಮ   ಹಣೆಗೆ, ಬಲ ಕೈಗೆ, ಕಣ್ಣಿನ ಬಳಿ ಹಾಗೂ ಬಲಕೋಲು ಕಾಲಿಗೆ ಗುದ್ದಿದ ಹಾಗೂ ರಕ್ತ ಗಾಯವಾಗಿದ್ದು. ಗಾಯಗೊಂಡ ಗಾಯಾಳು ಚಿಕಿತ್ಸೆಯ ಬಗ್ಗೆ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ  ಒಳರೋಗಿಯಾಗಿ ದಾಖಲಾಗಿರುವುದಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ಅ.ಕ್ರ. 49/2021  ಕಲಂ 279, 337  ಐಪಿಸಿ  ಯಂತೆ ಪ್ರಕರಣ ದಾಖಲಾಗಿರುತ್ತದೆ.

ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆ: . ಪಿರ್ಯಾದಿದಾರರಾದ ಶಂಕರ ಗೌಡ ಬಿರಾದಾರ(28) ಕಿರಿಯ ಇಂಜಿನಿಯರ್‌ (ವಿ) ಮೆಸ್ಕಾಂ, ಕಾರ್ಯ ಮತ್ತು ಪಾಲನಶಾಖೆ ಸೋಮಂತಡ್ಕ ರವರು ನೀಡಿದ ದೂರಿನಂತೆ ದಿನಾಂಕ: 19.05.2021 ರಂದು ಕೆ.ಎ 54-4403 ನೇ ಲಾರಿಯೊಂದನ್ನು ಅದರ ಚಾಲಕ ಚಾರ್ಮಾಡಿ ಕಡೆಯಿಂದ ಉಜಿರೆ ಕಡೆಗೆ ಚಲಾಯಿಸಿಕೊಂಡು ಬರುತ್ತಿರುವ ಸಮಯ ಬೆಳ್ತಂಗಡಿ ತಾಲೂಕು ಮುಂಡಾಜೆ ಗ್ರಾಮದ ಮುಂಡಾಜೆ ನರ್ಸರಿ ಬಳಿ ತಲುಪುತ್ತಿದ್ದಂತೆ ಲಾರಿಯನ್ನು ದುಡುಕುತನದಿಂದ ಚಲಾಯಿಸಿ ರಸ್ತೆಯ ಎಡ ಬದಿಯಲ್ಲಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ತುಂಡಾಗಿ ಜಖಂ ಗೊಂಡಿರುತ್ತದೆ. ಹಾಗೂ ಡಿಕ್ಕಿ ಹೊಡೆದ ಲಾರಿ ಕೂಡ ಮಗುಚಿ ಬಿದ್ದು ಜಖಂಗೊಂಡಿರುತ್ತದೆ ಈ ಬಗ್ಗೆ ಬೆಳ್ತಂಗಡಿ ಸಂಚಾರ  ಠಾಣಾ ಅ.ಕ್ರ: 46/2021, ಕಲಂ; 279, ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತರೆ ಪ್ರಕರಣ: 1

ಪುತ್ತೂರು ನಗರ ಪೊಲೀಸ್ ಠಾಣೆ : ಪೊಲೀಸ್‌ ಉಪ ನಿರೀಕ್ಷಕರು ಪುತ್ತೂರು ನಗರ ಠಾಣೆ ರವರು ದಿನಾಂಕ: 20-05-2021 ರಂದು ಸಿಬ್ಬಂದಿಯವರ ಜೊತೆ ರೌಂಡ್ಸ್ ಕರ್ತವ್ಯದಲ್ಲಿರುವ ಸಮಯ ಪುತ್ತೂರು ತಾಲೂಕು ಕೆಮ್ಮಿಂಜೆ ಗ್ರಾಮದ ಸಂಜಯನಗರ ಎಂಬಲ್ಲಿ ಆರೋಪಿ ಸುದರ್ಶನ್ ಪ್ರಾಯ: 45 ವರ್ಷ ಎಂಬಾತನು ಯಾವುದೇ ಇಲಾಖೆಯಿಂದ ಪರವಾನಿಗೆಯನ್ನು ಹೊಂದದೆ ಅಧಿಕ ಲಾಭ ಗಳಿಸುವ ಉದ್ದೇಶದಿಂದ ಅಕ್ರಮವಾಗಿ 7 ಬೆಂಗಳೂರು ವಿಸ್ಕಿ ಎಂದು ಬರೆದಿರುವ ಸ್ಯಾಚೆಟ್ ಗಳನ್ನು ಮಾರಾಟ ಮಾಡುತ್ತಿದ್ದವನನ್ನು ವಶಕ್ಕೆ ಪಡೆದು ಆತನನ್ನು ಪಂಚರ ಸಮಕ್ಷಮ ಅಂಗ ಜಪ್ತಿ ಮಾಡಿದಾಗ ಆತನ ಶರ್ಟ್ ನ ಜೇಬಿನಲ್ಲಿದ್ದ ಮದ್ಯ ಮಾರಾಟ ಮಾಡಿ ಬಂದ ಹಣ ರೂ 150/ ನಗದನ್ನು ಹಾಗೂ 180 ಎಂ.ಎಲ್ ನ 7  ಬೆಂಗಳೂರು ವಿಸ್ಕಿ ಸ್ಯಾಚೆ ಟ್ ಗಳನ್ನು ಹಾಗೂ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು ಸ್ವಾಧೀನಪಡಿಸಿಕೊಂಡ ವಿಸ್ಕಿಯ ಮೌಲ್ಯ 420 ರೂಪಾಯಿ ಹಾಗೂ ಮಾರಾಟ ಮಾಡಿ ಬಂದ ನಗದು ರೂ 150  ಆಗಿರುತ್ತದೆ ಈ ಬಗ್ಗೆ ಪುತ್ತೂರು ನಗರ ಠಾಣಾ ಅ.ಕ್ರ:  38/2021 ಕಲಂ: 15, 32(2) (a) KE Act ಯಂತೆ ಪ್ರಕರಣ ದಾಖಲಿಸಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 21-05-2021 11:25 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080