ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: 1

 

ಪುತ್ತೂರು ಸಂಚಾರ ಪೊಲೀಸ್ ಠಾಣೆ: . ಪಿರ್ಯಾದಿದಾರರಾದ ಕೃಷ್ಣ ಬಿ, ಪ್ರಾಯ 42 ವರ್ಷ, ತಂದೆ: ಅನಂತರಾಮ ಶರ್ಮ, ವಾಸ: ಬಳಂಗುರಿ ಮನೆ, ಮಚ್ಚಿನ ಅಂಚೆ & ಗ್ರಾಮ, ಬೆಳ್ತಂಗಡಿ ತಾಲೂಕು ರವರು ನೀಡಿದ ದೂರೇನೆಂದರೆ ದಿನಾಂಕ 27-02-2021 ರಂದು ಆರೋಪಿ ಕಾರು ಚಾಲಕ ಕೆ.ಹೊನ್ನಪ್ಪ ಗೌಡ ಎಂಬವರು KA-03-AE-5019 ನೇ ನೋಂದಣಿ ನಂಬ್ರದ ಕಾರನ್ನು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನೆಲ್ಯಾಡಿ ಕಡೆಯಿಂದ ಮಂಗಳೂರು ಕಡೆಗೆ ಚಲಾಯಿಸಿಕೊಂಡು ಹೋಗಿ, ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಉಪ್ಪಿನಂಗಡಿ ಎಂಬಲ್ಲಿ ಕುಮಾರಧಾರ ಸೇತುವೆ ಬಳಿ ಯಾವುದೇ ಸೂಚನೆಯನ್ನು ನೀಡದೇ ಒಮ್ಮೆಲೇ ಸಹಸ್ರಲಿಂಗೇಶ್ವರ ದೇವಸ್ಥಾನಕ್ಕೆ ಹೋಗುವ ರಸ್ತೆ ಕಡೆಗೆ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಪಿರ್ಯಾದುದಾರರು ಸವಾರರಾಗಿ, ಪುತ್ತೂರು ಕಡೆಯಿಂದ ಇಳಂತಿಲ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ  KA-21-EA-8895 ನೇ ನೋಂದಣಿ ನಂಬ್ರದ ಸ್ಕೂಟರ್‌ಗೆ ಅಪಘಾತವಾಗಿ, ಪಿರ್ಯಾದುದಾರರು ಸ್ಕೂಟರ್‌ ಸಮೇತ ರಸ್ತೆಗೆ ಬಿದ್ದು, ಪಿರ್ಯಾದುದಾರರಿಗೆ ಬಲಕೈಯ ಮಣಿಗಂಟಿಗೆ ಹಾಗೂ ಬಲಕಾಲಿನ ಪಾದಕ್ಕೆ ಗುದ್ದಿದ ಹಾಗೂ ರಕ್ತಗಾಯಗಳಾಗಿ, ಉಪ್ಪಿನಂಗಡಿಯ ಧನ್ವಂತರಿಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆ ಬಗ್ಗೆ ಪುತ್ತೂರು ಮಹಾವೀರ  ಆಸ್ಪತ್ರೆಗೆ ದಾಖಲಿಸಿರುತ್ತಾರೆ ಈ ಬಗ್ಗೆ ಪುತ್ತೂರು ಸಂಚಾರ ಠಾಣೆ  ಅ.ಕ್ರ:  39/2021 ಕಲಂ: 279, 337 ಐಪಿಸಿ  ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಜೀವಬೆದರಿಕೆ ಪ್ರಕರಣ: 1

 

ವೇಣೂರು ಪೊಲೀಸ್ ಠಾಣೆ : ಪಿರ್ಯಾದಿದಾರರಾದ ಶ್ರೀಮತಿ ಸಾನಿಯತ್ (24) ಗಂಡ: ಮಹಮ್ಮದ್ ಅನ್ಸರ್ ವಾಸ: ಆರ್ ಆರ್ ಪ್ಲಾಜಾ ಪ್ಲಾಟ್ ನಂಬ್ರ 201 ಪಿಂಗರ ಹೊಟೇಲ್ ಬಳಿ ಆಳ್ವಾಸ್ ರಸ್ತೆ ಮೂಡಬಿದ್ರೆ ರವರು ದಿನಾಂಕ: 26.02.2021 ರಂದು ಬೆಳ್ತಂಗಡಿ ತಾಲೂಕು ಹೊಸಂಗಡಿ ಗ್ರಾಮದ ಪಡ್ಡಂದಡ್ಕದ ತನ್ನ ತಾಯಿಯ ಮನೆಗೆ ಬಂದಿದ್ದು, ಅಲ್ಲಿ ಅಣ್ಣ ನವಾಝ್, ಅಣ್ಣನ ಹೆಂಡತಿ ಸೌದಾ  ಮತ್ತು ತಾಯಿ ಜುಬೈದಾ ರವರಲ್ಲಿ ಮಾತನಾಡಿ ಪಿರ್ಯಾದಿದಾರರು ತಾಯಿಯ ಮನೆಯಿಂದ ಹೊರಡುವಾಗ ಮನೆಯ ಚಾವಡಿಯಲ್ಲಿದ್ದ ನವಾಝ್ ನು ಬಂದು ಪಿರ್ಯಾದಿದಾರರನ್ನು ತಡೆದು ನಿಲ್ಲಿಸಿ ನೀನು ಈ ಹಿಂದೆ ನನ್ನ ಮೇಲೆ ದೂರು ನೀಡಿ, ಜುಲೈಕಾಳಿಗೆ ಬೆಂಬಲ ನೀಡಿದ್ದೀಯಾ ನಿನ್ನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿ ಅವಾಚ್ಯ ಶಬ್ದಗಳಿಂದ ಬೈದು ಕೈಯಿಂದ ಕೆನ್ನೆಗೆ ಹೊಡೆದಿದಲ್ಲದೇ ನಿನ್ನನ್ನು ಮುಂದಕ್ಕೆ ಕೊಲ್ಲದೇ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿರುತ್ತಾರೆ. ಈ ಬಗ್ಗೆ ವೇಣೂರು ಠಾಣಾ ಅ.ಕ್ರ ನಂಬ್ರ14/2021 ಕಲಂ: 341, 323, 504, 506 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತರೆ ಪ್ರಕರಣ: 2

 

ವಿಟ್ಲ ಪೊಲೀಸ್ ಠಾಣೆ : ದಿನಾಂಕ:27-02-2021 ರಂದು  ವಿಟ್ಲ ಪೊಲೀಸ್‌ ಠಾಣೆಯಲ್ಲಿ ಕಲಂ: 447,504,323,354,506 ಜೊತೆಗೆ 34 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ದ.ಕ ಮಹಿಳಾ ಪೊಲೀಸ್ ಠಾಣೆ : ದಿನಾಂಕ 27.02.2021  ರಂದು ದ.ಕ ಮಹಿಳಾ ಪೊಲೀಸ್ ಠಾಣೆಯಲ್ಲಿ ಕಲಂ 143147,341, 342,354,354(d)323,504,506,r/w149 ಐಪಿಸಿ & 67 of  IT Act ಯಂತೆ ಪ್ರಕರಣ ದಾಖಲಾಗಿರುತ್ತದೆ

 

ಅಸ್ವಾಭಾವಿಕ ಮರಣ ಪ್ರಕರಣ: 3

 

ವಿಟ್ಲ ಪೊಲೀಸ್ ಠಾಣೆ : ಪಿರ್ಯಾದಿದಾರರಾದ ರಘುನಾಥ ಪ್ರಾಯ 39 ವರ್ಷ ತಂದೆ : ಬೆಳ್ಯಪ್ಪ ಗೌಡವಾಸ: ಆಲಂಗಾರು ಮನೆ:ವಿಟ್ಲ ಕಸಬಾ ಗ್ರಾಮ ಬಂಟ್ವಾಳ ತಾಲೂಕು ರವರ ತಂದೆಯವರು ಸುಮಾರು 15 ವರ್ಷಗಳಿಂದ ಅಮಲು ಪದಾರ್ಥ ಸೇವಿಸುವ ಚಟವನ್ನು ಹೊಂದಿದ್ದು. ಜೀವನದಲ್ಲಿ ಜಿಗುಪ್ಸೆಗೊಂಡಿದ್ದವರು ದಿನಾಂಕ 19-02-2021 ರಂದು ರಾತ್ರಿ ಸುಮಾರು 12.00 ಗಂಟೆ ಸಮಯಕ್ಕೆ ತನ್ನ ಮನೆಯ ಬಳಿಕ ಕೊಟ್ಟಿಗೆಯಲ್ಲಿ ಎಂಡೋ ಫಿನ್ ಎಂಬ ವಿಷ ಪದಾರ್ಥವನ್ನು ಸೇವಿಸಿ ಅಸ್ವಸ್ಥಗೊಂಡವರನ್ನು ಚಿಕಿತ್ಸೆ ಬಗ್ಗೆ ಪುತ್ತೂರು ಪ್ರಗತಿ ಆಸ್ಪತ್ರೆಗೆ ದಾಖಲಿಸಿದ್ದು. ಚಿಕಿತ್ಸೆಯಲ್ಲಿರುತ್ತ  ದಿನಾಂಕ 27-02-2021 ರಂದು ವೈದ್ಯರ ಚಿಕಿತ್ಸೆಗೆ ಸ್ಪಂದಿಸದೇ ಮೃತ ಪಟ್ಟಿರುವುದಾಗಿದೆ. ಈ ಬಗ್ಗೆ ವಿಟ್ಲ ಠಾಣಾ ಯು ಡಿ ಅರ್ ನಂಬ್ರ 07/2021  ಕಲಂ 174   ಸಿ ಅರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಧರ್ಮಸ್ಥಳ ಪೊಲೀಸ್ ಠಾಣೆ :ಪಿರ್ಯಾದಿದಾರರಾದ ಮೋಹನ ಟಿ ಪ್ರಾಯ:48 ವರ್ಷ ತಂದೆ; ತಂಗಪ್ಪನ್ ವಾಸ: ಜೋಡುಸ್ಥಾನ ಮನೆ ಧರ್ಮಸ್ಥಳ ಗ್ರಾಮ ಬೆಳ್ತಂಗಡಿ ತಾಲೂಕು ರವರು ಶ್ರೀಕ್ಷೇತ್ರ ಧರ್ಮಸ್ಥಳ ದೇವಸ್ಥಾನದ ಮಾಹಿತಿ ಕಛೇರಿಯಲ್ಲಿ  ಮೇಲ್ವಿಚಾರಕರಾಕರಾಗಿ ಕೆಲಸ ಮಾಡಿಕೊಂಡಿದ್ದು ದಿನಾಂಕ:27-02-2021 ರಂದು  ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಬಾಹುಬಲಿ ಬೆಟ್ಟ ಎಂಬಲ್ಲಿರುವ ಕಾಡಿನಲ್ಲಿ ಸುಮಾರು 35-40 ವರ್ಷ ಪ್ರಾಯದ ಅಪರಿಚಿತ ಗಂಡಸು ವ್ಯಕ್ತಿಯು ಬೆಂಕಿ ಹಚ್ಚಿಕೊಂಡು ಉರಿಯುತ್ತಿರುವುದು  ಕಂಡುಬರುತ್ತದೆ ಎಂಬುದಾಗಿ ಮಾಹಿತಿ ಬಂದಿದ್ದು  ಪಿರ್ಯಾದುದಾರರು ಹೋಗಿ ನೋಡಲಾಗಿ  ಸುಮಾರು 35-40 ವರ್ಷ ಪ್ರಾಯದ ಅಪರಿಚಿತ  ಗಂಡಸು ವ್ಯಕ್ತಿಯು ಸುಟ್ಟ ಗಾಯಗಳಿಂದ ಮೃತಪಟ್ಟಿದ್ದು ಕಂಡು ಬರುತ್ತದೆ. ಮೃತ ವ್ಯಕ್ತಿಯು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ  ಬಂದವರು ಯಾವುದೋ ಕಾರಣಕ್ಕಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ದೇಹದ ಮೇಲೆ ಯಾವುದೋ ದ್ರಾವಣವನ್ನು ಮೈಮೇಲೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಯುಡಿಆರ್ ನಂ: 11/2021 ಕಲಂ:174 ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಬೆಳ್ಳಾರೆ ಪೊಲೀಸ್ ಠಾಣೆ : ಪಿರ್ಯಾದಿದಾರರಾದ ಟಿ.ಚೆನ್ನಪ್ಪ ಗೌಡ, ಪ್ರಾಯ 62 ವರ್ಷ, ತಂದೆ: ದಿ|| ಹೊನ್ನಪ್ಪ ಗೌಡ, ವಾಸ: ತಂಟೆಪ್ಪಾಡಿ ಮನೆ, ಅಮರಮುಡ್ನೂರು ಗ್ರಾಮ, ಸುಳ್ಯ ತಾಲೂಕು ರವರು ನೀಡಿದ ದೂರೇನೆಂದರೆ ದಿನಾಂಕ 27-02-2021 ರಂದು  ಕೊಟ್ಟಿಗೆಯಲ್ಲಿಟ್ಟಿದ್ದ ರಬ್ಬರ್ ಹಾಲನ್ನು ಶೀಟ್ ಮಾಡಲು ಉಪಯೋಗಿಸುವ ಕೆಮಿಕಲ್ ದ್ರಾವಣವನ್ನು (ಎಸಿಡ್) ಸೇವಿಸಿ ಅಸ್ವಸ್ಥಗೊಂಡವರನ್ನು ಅವರ ಅಣ್ಣನ ಮಗ ಯಶ್ವಿನ್ ಹಾಗೂ ಮಗ ವಿನೀತ್ ರವರು 108 ಆಂಬುಲೆನ್ಸ್ ವಾಹನದಲ್ಲಿ ಚಿಕಿತ್ಸೆಯ ಬಗ್ಗೆ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸಲಹೆ ನೀಡಿದ ಮೇರೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಲಪಿದಾಗ ಅಲ್ಲಿನ ವೈದ್ಯರು ಪರೀಕ್ಷಿಸಿ ವೆಂಕಟ್ರಮಣರು ಮೃತಪಟ್ಟಿರುವುದಾಗಿ ಧೃಡಪಡಿಸಿರುತ್ತಾರೆ. ಈ ಬಗ್ಗೆ  ಬೆಳ್ಳಾರೆ ಪೊಲೀಸ್ ಠಾಣಾ ಯು.ಡಿ.ಆರ್ 05/2021.  ಕಲಂ 174 ಸಿಆರ್ ಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ

ಇತ್ತೀಚಿನ ನವೀಕರಣ​ : 28-02-2021 10:59 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080