ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: 2

 

ಪುತ್ತೂರು ಸಂಚಾರ ಪೊಲೀಸ್ ಠಾಣೆ: . ಪಿರ್ಯಾದಿದಾರರಾದ ಹನುಮಂತರಾಜು ಟಿ, ಪ್ರಾಯ 37 ವರ್ಷ, ತಂದೆ: ತೋಪಯ್ಯ, ವಾಸ: ನಂಬ್ರ: 27, ಮಿನ್ನಾಪುರ ಗ್ರಾಮ, ಜಕ್ಕನಹಳ್ಳಿ ಅಂಚೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ರವರು ನೀಡಿದ ದೂರಿನಂತೆ ದಿನಾಂಕ 06-05-2021 ರಂದು ಆರೋಪಿ ಲಾರಿ ಚಾಲಕ ಹನುಮಂತರಾಜು ಟಿ ಎಂಬವರು KA-52-A-8127 ನೇ ನೋಂದಣಿ ನಂಬ್ರದ ಲಾರಿಯಲ್ಲಿ ಮದ್ಯದ ಬಾಟಲಿಗಳ ಲೋಡನ್ನು ತುಂಬಿಕೊಂಡು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಚಲಾಯಿಸಿಕೊಂಡು ಹೋಗಿ, ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ  ನೀರಕಟ್ಟೆ ಎಂಬಲ್ಲಿ  ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಲಾರಿಯು ಚಾಲಕನ ಹತೋಟಿ ತಪ್ಪಿ ರಸ್ತೆಯ ಎಡಭಾಗದ ತಗ್ಗಿಗೆ ಮಗುಚಿ ಬಿದ್ದು, ಲಾರಿ ಹಾಗೂ ಅದರಲ್ಲಿದ್ದ ಮದ್ಯದ ಬಾಟಲಿಗಳ ಲೋಡ್‌ ಜಖಂಗೊಂಡಿರುತ್ತದೆ. ಯಾರಿಗೂ ಗಾಯಗಳಾಗಿರುವುದಿಲ್ಲ ಈ ಬಗ್ಗೆ ಪುತ್ತೂರು ಸಂಚಾರ ಠಾಣೆ  ಅ.ಕ್ರ:  81/2021 ಕಲಂ: 279 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಪುತ್ತೂರು ಸಂಚಾರ ಪೊಲೀಸ್ ಠಾಣೆ: . ಪಿರ್ಯಾದಿದಾರರಾದ ವಿನಯ, ಪ್ರಾಯ 32 ವರ್ಷ, ತಂದೆ: ವೇದಪ್ಪ ಪೂಜಾರಿ, ವಾಸ: ಬೆದ್ರೋಡಿ ಮನೆ, ವಳಾಲು ಅಂಚೆ, ಬಜತ್ತೂರು ಗ್ರಾಮ, ಪುತ್ತೂರು ತಾಲೂಕು ರವರು ನೀಡಿದ ದೂರಿನಂತೆ ದಿನಾಂಕ 06-05-2021 ರಂದು ಆರೋಪಿ ಲಾರಿ ಚಾಲಕ ಮಂಜುನಾಥ ಎಸ್‌ ತಲಾವಾರ್‌ ಎಂಬವರು KA-19-AC-2893 ನೇ ನೋಂದಣಿ ನಂಬ್ರದ ಲಾರಿಯನ್ನು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಚಲಾಯಿಸಿಕೊಂಡು ಹೋಗಿ, ಪುತ್ತೂರು ತಾಲೂಕಿನ ಗೋಳಿತೊಟ್ಟು ಗ್ರಾಮದ  ಸಣ್ಣಂಪಾಡಿ ಎಂಬಲ್ಲಿ  ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಪೂರ್ತಿ ರಾಂಗ್‌ ಸೈಡ್‌ನಲ್ಲಿ ಚಲಾಯಿಸಿದ ಪರಿಣಾಮ, ಸೇಸಪ್ಪ ಗೌಡ ಎಂಬವರು ಗೋಳಿತೊಟ್ಟು ಕಡೆಯಿಂದ ಉಪ್ಪಿನಂಗಡಿ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ KA-21-R-5522 ನೇ ನೋಂದಣಿ ನಂಬ್ರದ ಮೋಟಾರ್‌ ಸೈಕಲ್‌ಗೆ ಅಪಘಾತವಾಗಿ, ಸೇಸಪ್ಪ ಗೌಡ ರವರು ಮೋಟಾರ್‌ ಸೈಕಲ್‌ ಸಮೇತ ರಸ್ತೆ ಬದಿಗೆ ಬಿದ್ದು, ಬಲಕೈ ಹಾಗೂ ತಲೆಗೆ ಗಾಯಗಳಾಗಿ ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ಎ.ಜೆ. ಆಸ್ಪತ್ರೆಗೆ ಕಳುಹಿಸಲಾಗಿದೆ ಈ ಬಗ್ಗೆ ಪುತ್ತೂರು ಸಂಚಾರ ಠಾಣೆ  ಅ.ಕ್ರ:  82/2021 ಕಲಂ: 279, 337 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಅಸ್ವಾಭಾವಿಕ ಮರಣ ಪ್ರಕರಣ: 2

 

ಧರ್ಮಸ್ಥಳ ಪೊಲೀಸ್ ಠಾಣೆ : ಪಿರ್ಯಾದಿದಾರರಾದ ಶ್ರೀಮತಿ ಗೀತಾ ಚಲವಾದಿ ಪ್ರಾಯ:38 ವರ್ಷ ತಂದೆ: ಪರಸಪ್ಪ ಚಲವಾದಿ, ವಾಸ: ಬಾಳುತಿ ಗ್ರಾಮ ಬಸವಣ ಬಾಗೇ ವಾಡಿ ತಾಲೂಕು,ವಿಜಯಪುರ ಜಿಲ್ಲೆ ರವರ ಗಂಡ ಪರಸಪ್ಪ ಚಲವಾದಿ(43 ವರ್ಷ) ಎಂಬವರು ಕೆಎಸ್ಆರ್ಟಿಸಿ ಧರ್ಮಸ್ಥಳ ಘಟಕದಲ್ಲಿ ಮೆಕ್ಯಾನಿಕ್ ಆಗಿ ಕರ್ತವ್ಯ ನಿರ್ವಹಿಸಿಕೊಂಡಿದ್ದು, ದಿನಾಂಕ: 27-04-2021ರಂದು ಶೀತ, ಜ್ವರ ಕಾಣಿಕೊಂಡ ಮೇರೆಗೆ ವೈಧ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ವೈಧ್ಯರು ಪರೀಕ್ಷಿಸಿ ಕೋವಿಡ್ ಪಾಸಿಟಿವ್ ಆಗಿರುವುದಾಗಿ ತಿಳಿಸಿರುತ್ತಾರೆ. ಅದರಂತೆ ಪರಸಪ್ಪ ಚಲವಾದಿರವರು ಬಾಡಿಗೆ ಮನೆಯಾದ ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮಮಂದಿರದ ಬಳಿಯ ಬಾಡಿಗೆ ಮನೆಯಲ್ಲಿ ಹೋಂ ಕ್ವಾರಂಟೈನ್ ವಿಶ್ರಾಂತಿಯಲ್ಲಿದ್ದವರು, ದಿನಾಂಕ: 05-05-2021 ರಂದು  ಮಧ್ಯಾಹ್ನ 3.45 ಗಂಟೆ ಸಮಯಕ್ಕೆ ಪರಸಪ್ಪ ಚಲವಾದಿಯವರು ತೀವ್ರ ಅಸ್ವಸ್ಥಗೊಂಡವರನ್ನು ಬೆಳ್ತಂಗಡಿ ಸರಕಾರಿ ಆಸ್ಬತ್ರೆಗೆ ಚಿಕಿತ್ಸೆ ಬಗ್ಗೆ ಕರೆದುಕೊಂಡು ಬಂದಿದ್ದು, ವೈದ್ಯರು ಪರೀಕ್ಷಿಸಿ ಮೃತ ಪಟ್ಟಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಯುಡಿಆರ್ ನಂ:33/2021 ಕಲಂ:174 ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಬೆಳ್ಳಾರೆ ಪೊಲೀಸ್ ಠಾಣೆ :ಪಿರ್ಯಾದಿದಾರರಾದ ಮಂಜುನಾಥ ಪ್ರಾಯ 29 ವರ್ಷ, ತಂದೆ: ಸಿದ್ದ, ವಾಸ: ವಾಲಗದಕೇರಿ ಮನೆ, ಸುಬ್ರಹ್ಮಣ್ಯ ಗ್ರಾಮ, ಕಡಬ ತಾಲೂಕು, ರವರು ನೀಡಿದ ದೂರಿನಂತೆ ಕಡಬ ತಾಲೂಕು ಎಣ್ಮೂರು ಗ್ರಾಮದ ಎಣ್ಮೂರು ನಿವಾಸಿ ಶ್ವೇತಾ ವಿ.ಆರ್ ಪ್ರಾಯ 22 ವರ್ಷ, ಗಂಡ: ಪ್ರವೀಣ, ರವರು ಅವಳ ಗಂಡನ ಮನೆಯಲ್ಲಿ ಮಾನಸಿಕ ಖಾಯಿಲೆ ಪೀಡಿತ ಅತ್ತೆ ಮತ್ತು ವೃದ್ದ ಮಾವ ರವರ ಉಪಚಾರವನ್ನು ಹಾಗೂ ಇಬ್ಬರು ಸಣ್ಣ ಮಕ್ಕಳು ಜೊತೆಗೆ ಮನೆಯ ಕೆಲಸವನ್ನು ಒಬ್ಬಳೆ ಮಾಡಿಕೊಂಡಿದ್ದು, ಇದರಿಂದಾಗಿ ತೀವ್ರವಾಗಿ ನೊಂದು ಜೀವನದಲ್ಲಿ ಜಿಗುಪ್ಸೆ ಹೊಂದಿ ದಿನಾಂಕ 26-04-2021 ರಂದು ಮಧ್ಯಾಹ್ನ 2-00 ಗಂಟೆಗೆ ಮನೆಯಲ್ಲಿದ್ದ ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡವಳನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಅವಳ ಗಂಡ ಪ್ರವೀಣರವರು ಕರೆದುಕೊಂಡು ಹೋಗಿದ್ದು ಅಲ್ಲಿನ ವೈದ್ಯರು ಚಿಕಿತ್ಸೆ ನೀಡಿ ಅವಳು ಚಿಕಿತ್ಸೆಗೆ ಸ್ಪಂದಿಸದೇ ಇದ್ದಾಗ ವೈದ್ಯರ ಸಲಹೆಯಂತೆ ದಿನಾಂಕ 28.04.2021 ರಂದು ಅವಳನ್ನು ಹೆಚ್ಚಿನ ಚಿಕಿತ್ಸೆಯ ಬಗ್ಗೆ ಪುತ್ತೂರಿನ ಧನ್ವಂತರಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಚಿಕಿತ್ಸೆ ಬಗ್ಗೆ ದಾಖಲಾಗಿದ್ದವರು ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ 06.05.2021 ರಂದು ಮೃತಪಟ್ಟಿರುವುದಾಗಿದೆ.  ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣಾ ಯು.ಡಿ.ಆರ್ 12/2021  ಕಲಂ 174 ಸಿ.ಆರ್.ಪಿ.ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 07-05-2021 12:37 PM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080