ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: 3

 

ಉಪ್ಪಿನಂಗಡಿ ಪೊಲೀಸ್ ಠಾಣೆ: . ಪಿರ್ಯಾದಿದಾರರಾದ ಬಾಲಕೃಷ್ಣ ಪ್ರಾಯ 36 ವರ್ಷ ತಂದೆ. ಅಣ್ಣಿ ಗೌಡ ವಾಸ: ಕಟ್ಟೆ ಮನೆ, ಶಿರಾಡಿ ಗ್ರಾಮ ಮತ್ತು ಅಂಚೆ,  ಕಡಬ ತಾಲೂಕು ರವರು ನೀಡಿದ ದೂರಿನಂತೆ ದಿನಾಂಕ: 06-09-2021ರಂದು ಬೆಳ್ತಂಗಡಿ ತಾಲೂಕು ಶಿರಾಡಿ ಗ್ರಾಮದ ಉದನೆ ಗಣೇಶಕಟ್ಟೆ ಬಳಿ ಪಿರ್ಯಾದಿದಾರರ ಬಾವ ಕುಶಾಲಪ್ಪ ಗೌಡ ಎಂಬವರು ಕಳಪ್ಪಾರು ಕಡೆಗೆ ಹೊಗುವರೇ ನಡೆದುಕೊಂಡು ಹೋಗುತ್ತಿರುವಾಗ ಸಕಲೇಶಪುರ ಕಡೆಯಿಂದ ಮಂಗಳೂರು ಕಡೆಗೆ  ಕೆಎ:20 ಝಡ್‌ 3774ನೇ ಕಾರನ್ನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು  ಕುಶಾಲಪ್ಪ ಗೌಡ ರವರಿಗೆ ಡಿಕ್ಕಿ ಹೊಡೆದ ಪರಿಣಾಮ  ಕುಶಾಲಪ್ಪ ಗೌಡರವರು ರಸ್ತೆಗೆಸೆಯಲ್ಪಟ್ಟು ಅವರ ತಲೆಗೆ, ಭುಜುಗಳಿಗೆ, ಸೊಂಟಕ್ಕೆ ಕಾಲುಗಳಿಗೆ ಮತ್ತು ಕೈಗೆ ರಕ್ತಗಾಯವುಂಟಾದವರನ್ನು ಚಿಕಿತ್ಸೆ ಬಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರಿಗೆ ಕರೆದುಕೊಂಡು ಹೋಗಿರುವುದು ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ಅ.ಕ್ರ 84/2021  ಕಲಂ  279 338 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆ: . ಪಿರ್ಯಾದಿದಾರರಾದ ಸುದರ್ಶನ (19), ತಂದೆ: ಸುಬ್ರಾಯ ಗೌಡ, ಅಂಚಿನಡ್ಕ ಮನೆ, ಮಾಡ್ನೂರು ಗ್ರಾಮ, ಪುತ್ತೂರು ತಾಲೂಕು ರವರು ನೀಡಿದ ದೂರಿನಂತೆ ದಿನಾಂಕ: 06-09-2021 ರಂದು ಕೆಎ 21 ವೈ 5510 ನೇ ಮೋಟಾರು ಸೈಕಲ್‌ನ್ನು ಅದರ ಸವಾರ ಮನೋಜ್‌ರವರು ಸಹಸವಾರನ್ನಾಗಿ ಯೋಗೀಶ್‌ರವರನ್ನು  ಕುಳ್ಳಿರಿಸಿಕೊಂಡು ಮಂಗಳೂರು -ಬೆಂಗಳೂರು ರಸ್ತೆಯಲ್ಲಿ ಸವಾರಿ ಮಾಡಿಕೊಂಡು ಹೋಗುತ್ತಾ ಬೆಳ್ತಂಗಡಿ ತಾಲೂಕು ರೆಖ್ಯಾ ಗ್ರಾಮದ ಎಂಜಿರಾ ಎಂಬಲ್ಲಿ ಒಮ್ಮೇಲೆ ದುಡುಕುತನದಿಂದ ಸವಾರಿ ಮಾಡಿ ಸವಾರ ಮತ್ತು ಸಹ ಸವಾರ ಮೋಟಾರು ಸೈಕಲ್‌ ಸಮೇತ ರಸ್ತೆಯ ಬಲಬದಿಗೆ ಸುಮಾರು 20 ಅಡಿ ದೂರ ಜಾರಿಕೊಂಡು ಹೋಗಿ ವಿರುದ್ದ ಧಿಕ್ಕಿನಿಂದ ಅಂದರೆ ಬೆಂಗಳೂರು  ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಎಮ್‌ ಎಚ್‌ 04 ಎಪ್‌ಡಿ 6126 ನೇ ಕಂಟೈನರ್‌ ಲಾರಿಯ ಮಂಬಾಗದ ಎಡಬದಿಗೆ ಢಿಕ್ಕಿ ಹೊಡೆದ ಪರಿಣಾಮ ಮೋಟಾರು ಸೈಕಲ್‌ ಸವಾರ ಮತ್ತು ಸಹ ಸವಾರ ಮೋಟಾರು ಸೈಕಲ್‌ ಸಮೇತ ರಸ್ತೆಗೆ ಬಿದ್ದು ಸವಾರ ಮನೋಜ್‌ ರವರಿಗೆ ಬಲ ಮತ್ತು ಎಡಕಾಲಿನ ತೋಡೆಗೆ , ಬಲಕಾಲಿನ ಮೊಣಕಾಲಿಗೆ, ಮೊಣಗಂಟಿಗೆ ತೀವ್ರ ರಕ್ತ ಗಾಯ ಹಾಗೂ ಸಹಸವಾರ ಯೋಗೀಶ್‌ ರವರಿಗೆ ತಲೆಗೆ, ಹೊಟ್ಟೆಗೆ, ಕಾಲಿಗೆ, ತೀವ್ರ ರಕ್ತಗಾಯವಾಗಿರುತ್ತದೆ, ಗಾಯಳುಗಳ ಪೈಕಿ ಮನೋಜ್‌ರವರನ್ನು ಚಿಕಿತ್ಸೆ ಬಗ್ಗೆ ಪುತ್ತೂರು ಆಸ್ಪತ್ರೆಗೆ ಸಾಗಿಸಿದಲ್ಲಿ ಅಲ್ಲಿನ ವೈದ್ಯರು ಪರೀಕ್ಷಿಸಿ ಮನೋಜ್‌ರವರು ಮೃತಪಟ್ಟಿರುವುದಾಗಿ ತಿಳಿಸಿದ್ದು ಸಹಸವಾರ ಯೋಗೀಶ್‌ರವರು ಚಿಕಿತ್ಸೆ ಬಗ್ಗೆ ಮಂಗಳೂರು ಯೂನಿಟಿ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ ಈ ಬಗ್ಗೆ ಬೆಳ್ತಂಗಡಿ ಸಂಚಾರ  ಠಾಣಾ ಅ.ಕ್ರ: 67/2021, ಕಲಂ; 279,338,304(a) ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಬಂಟ್ವಾಳ ಸಂಚಾರ ಪೊಲೀಸ್ ಠಾಣೆ: . ಪಿರ್ಯಾದಿದಾರರಾದ ದ್ರುವ ಶೆಟ್ಟಿ (18) ತಂದೆ: ಮಹಾಬಲ ಶೆಟ್ಟಿ ವಾಸ: ಕೊರೆದು ಮನೆ, ಬಡಗಬೆಳ್ಳೂರು ಅಂಚೆ ಮತ್ತು ಗ್ರಾಮ, ಬಂಟ್ವಾಳ ತಾಲೂಕು ರವರು ದಿನಾಂಕ 01-09-2021 ರಂದು ತನ್ನ ತಂದೆಯವರಾದ ಮಹಾಬಲ ಶೆಟ್ಟಿಯವರನ್ನು KA-70-E-0616ನೇ ಸ್ಕೂಟರಿನಲ್ಲಿ ಕುಳ್ಳಿರಿಸಿಕೊಂಡು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಂಟ್ವಾಳ ತಾಲೂಕು ಪಾಣೆಮಂಗಳೂರು ಗ್ರಾಮದ ಮೇಲ್ಕಾರ್ ಎಂಬಲ್ಲಿ ಹೊಗೆ ತಪಾಸಣೆ ಮಾಡುವರೇ  ಸೂಚನೆ ನೀಡಿ ರಸ್ತೆಯ ಬಲಕ್ಕೆ  ತಿರುಗಿಸುವ ಸಮಯ ಬಿ.ಸಿ.ರೋಡ್ ಕಡೆಯಿಂದ ನೊಂದಣಿ ಸಂಖ್ಯೆ ಆಗದ ಬುಲೆಟ್ ಮೋಟಾರ್ ಸೈಕಲನ್ನು ಅದರ ಸವಾರ ಅತೀ ವೇಗ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಸ್ಕೂಟರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರು ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಗಾಯಗೊಂಡು ಪಿರ್ಯಾದಿಯು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಹೊರ ರೋಗಿಯಾಗಿ ಚಿಕಿತ್ಸೆ ಪಡೆದಿದ್ದು ಪಿರ್ಯಾದಿಯ ತಂದೆ ಮಹಾಬಲ ಶೆಟ್ಟಿಯವರು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಬಗ್ಗೆ ದಾಖಲಾಗಿರುವುದಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ಅ.ಕ್ರ. 89/2021  ಕಲಂ 279,337 ಐಪಿಸಿ ಕಾಯ್ದೆ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಇತರೆ ಪ್ರಕರಣ: 2

 

ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆ : ದಕ್ಷಿಣ ಕನ್ನಡ ಮಹಿಳಾ ಠಾಣೆಯಲ್ಲಿ ಕಲಂ: 498(ಎ), 323, 324, 504, 506 ಜೊತೆಗೆ 34 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಬೆಳ್ಳಾರೆ ಪೊಲೀಸ್ ಠಾಣೆ : ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಕಲಂ 494, 498(ಎ), 323,504,506 ಮತ್ತು ಕಲಂ 12 ಪೋಕ್ಸೋ ಆಕ್ಟ್ ಮತ್ತು ಕಲಂ 75 ಜೆ.ಜೆ ಆಕ್ಟ್ ಯಂತೆ ಪ್ರಕರಣ ದಾಖಲಾಗಿರುತ್ತದೆ

ಇತ್ತೀಚಿನ ನವೀಕರಣ​ : 08-09-2021 09:21 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080