ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: 1

 

ಬಂಟ್ವಾಳ ಸಂಚಾರ ಪೊಲೀಸ್ ಠಾಣೆ: . ಪಿರ್ಯಾದಿದಾರರಾದ ಪ್ರವೀಣ್ ಗಟ್ಟಿ(38) ತಂದೆ: ದಿ|| ಪದ್ಮನಾಭ ಗಟ್ಟಿ, ವಾಸ: ಮಾರ್ನಬೈಲು ಮನೆ, ಸಜಿಪ ಮುನ್ನೂರು ಗ್ರಾಮ, ಬಂಟ್ವಾಳ ತಾಲೂಕು  ರವರು ನೀಡಿದ ದೂರಿನಂತೆ ದಿನಾಂಕ 08.06.2021 ರಂದು ಯಮುನಾ ರವರು ಹಾಲು ತೆಗೆದುಕೊಂಡು ರಸ್ತೆ ಬದಿಯಲ್ಲಿ ಮನೆ ಕಡೆಗೆ ಹೋಗುತ್ತಾ ಬಂಟ್ವಾಳ ತಾಲೂಕು ಸಜಿಪ ಮುನ್ನೂರು ಗ್ರಾಮದ ಮಾರ್ನಬೈಲು ತಲುಪಿದಾಗ ಮುಡಿಪು ಕಡೆಯಿಂದ KA-19-MG-8213 ನೇ ಓಮ್ನಿ ಕಾರನ್ನು ಅದರ ಚಾಲಕ ಅತೀವೇಗ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ರಸ್ತೆಯ ತೀರಾ ಬದಿಗೆ ಚಲಾಯಿಸಿಕೊಂಡು ಬಂದು ಯಮುನಾರವರಿಗೆ ಡಿಕ್ಕಿ ಹೊಡೆದು ಅಪಘಾತಪಡಿಸಿದ ಪರಿಣಾಮ ಯಮುನಾರವರ  ತಲೆಯ ಹಿಂಬದಿಗೆ ಗುದ್ದಿದ ಹಾಗೂ ರಕ್ತಗಾಯ, ಮುಖಕ್ಕೆ ತರಚಿದ ಗಾಯವಾದವರು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ಎ.ಜೆ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುವುದಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ಅ.ಕ್ರ. 54/2021  ಕಲಂ 279, 337  ಐಪಿಸಿ  ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಇತರೆ ಪ್ರಕರಣ: 2

 

ವಿಟ್ಲ ಪೊಲೀಸ್ ಠಾಣೆ : ವಿಟ್ಲ ಪೊಲೀಸ್‌ ಠಾಣೆಯಲ್ಲಿ ಕಲಂ: 504, 354, ಜೊತೆಗೆ 34 ಐಪಿಸಿ ,11, 12 ಫೋಕ್ಸೊ ಕಾಯ್ದೆ ಮತ್ತು  ಕಲಂ:3(1)(w) (ii), 3(2)(Va) SC & ST (PA) Act 2015 ಕಾಯ್ದೆ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಬೆಳ್ತಂಗಡಿ ಪೊಲೀಸ್ ಠಾಣೆ : ಸಹಾಯಕ ಪೊಲೀಸ್‌ ಉಪನಿರೀಕ್ಷಕರು ಬೆಳ್ತಂಗಡಿ ಪೊಲೀಸ್‌ ಠಾಣೆ ರವರು ದಿನಾಂಕ:09-06-2021  ರಂದು ಬೆಳ್ತಂಗಡಿ ತಾಲೂಕು ನಡ ಗ್ರಾಮದ ನಡು ಬೈಲು ಎಂಬಲ್ಲಿಗೆ ತಲುಪಿ ಸಿಬ್ಬಂದಿಗಳು ಹಾಗೂ ಪಂಚರೊಂದಿಗೆ ದಾಳಿ ನಡೆಸಿದಾಗ ಆರೋಪಿಗಳು ಹಣವನ್ನು ಪಣವಾಗಿಟ್ಟು ಕೋಳಿ ಅಂಕವೆಂಬ ಜೂಜಾಟ ಆಡುತ್ತಿದ್ದು, ಕೆಲವು ಜನರು ಆರೋಪಿಗಳು ಓಡಿ ಹೋಗಿದ್ದು, ಒಬ್ಬ ಆರೋಪಿ ಹಾಗೂ ಸ್ಥಳದಲ್ಲಿದ್ದ 5 ಕೋಳಿಗಳು ಮತ್ತು ಸೊತ್ತುಗಳನ್ನು ವಶಕ್ಕೆ ಪಡೆದು ಕೊಂಡಿದ್ದು, ಆರೋಪಿಗಳು ರಾಜ್ಯ ಸರಕಾರದ ನಿರ್ದೆಶನ ದಂತೆ ಮಾರಕ ಸಾಂಕ್ರಮಿಕ ರೊಗ ನೊವೆಲ್ ಕೊರೊನಾ ವೈರಸ್ ಹರಡದಂತೆ ಮಾನ್ಯ ಜಿಲ್ಲಾಧಿಕಾರಿ ಯವರ ಆದೇಶವಿದ್ದರೂ ಪ್ರಾಣಕ್ಕೆ ಅಪಾಯಕಾರಿಯಾದ ಸೊಂಕನ್ನು ಹರಡುವ ಕೃತ್ಯವನ್ನು ನಿರ್ಲಕ್ಯ ದಿಂದ ಮಾಡಿ ಮಾನ್ಯ ದ,ಕ ಜಿಲ್ಲಾಧಿಕಾರಿಯವರು ವಿದ್ಯುಕ್ತವಾಗಿ ಪ್ರಸ್ತಾಪಿಸಿದ ಆದೇಶವನ್ನು ಉಲ್ಲಂಘಿಸಿದ ಆರೋಪಿಗಳ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣಾ ಅ.ಕ್ರ 57/2021 ಕಲಂ. 87 KP Act & ಕಲಂ: 269 ಜೊತೆಗೆ 34 ಐ.ಪಿ,ಸಿ  ಮತ್ತು ಕಲಂ: 5(1)(4) ಕರ್ನಾಟಕ ಸಾಂಕ್ರಾಮಿಕ ರೋಗಗಳ ಆದ್ಯಾದೇಶ-2020 ಯಂತೆ ಪ್ರಕರಣ ದಾಖಲಿಸಲಾಗಿರುತ್ತದೆ

ಇತ್ತೀಚಿನ ನವೀಕರಣ​ : 10-06-2021 11:30 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080