ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: 1

 

ಪುಂಜಾಲಕಟ್ಟೆ ಪೊಲೀಸ್ ಠಾಣೆ: ಪಿರ್ಯಾದಿದಾರರಾದ ಶಬೀರ್ , ಪ್ರಾಯ: 36 ವರ್ಷ, ತಂದೆ: ಇಸಾಕ್ ಸಾಹೇಬ್, ವಾಸ: ನೇರಳಕಟ್ಟೆ ಮನೆ, ಪಿಲಾತಬೆಟ್ಟು ಗ್ರಾಮ, ಬಂಟ್ವಾಳ ತಾಲೂಕು ರವರು ನೀಡಿದ ದೂರಿನಂತೆ ದಿನಾಂಕ: 15.10.2021 ರಂದು ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಇರ್ವತ್ತೂರು ಗ್ರಾಮದ ಕುಮಂಗಿಲ ಎಂಬಲ್ಲಿ ಮೂರ್ಜೆ-ನೈನಾಡು ಸಾರ್ವಜನಿಕ ಡಾಮಾರು ರಸ್ತೆಯಲ್ಲಿ ನೈನಾಡು ಕಡೆಯಿಂದ ಮೂರ್ಜೆ ಕಡೆಗೆ KA70E2292 ನೇ TVS JUPITER ದ್ವಿಚಕ್ರ ವಾಹನವನ್ನು ಅದರ ಸವಾರ ದುರ್ಗಾ ಪ್ರಸಾದ್ ಎಂಬವರು ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ರಸ್ತೆಯ ತಪ್ಪು ಬದಿಗೆ ಚಲಾಯಿಸಿ ಎದುರುಗಡೆಯಿಂದ ಅಂದರೆ ಮೂರ್ಜೆ ಕಡೆಯಿಂದ ನೈನಾಡು ಕಡೆಗೆ ಪೊಲಿಸ್ ಸಿಬ್ಬಂದಿ ಅಬೂಬಕ್ಕರ್ ಎಂಬವರು ಸವಾರಿ ಮಾಡಿಕೊಂಡು ಹೋಗುತ್ತಿದ್ದ ಮೋಟಾರ್ ಸೈಕಲ್ ನಂಬ್ರ KA19HE0893 ನೇದಕ್ಕೆ ಢಿಕ್ಕಿ ಹೊಡೆದ ಪರಿಣಾಮವಾಗಿ ಎರಡೂ ವಾಹನಗಳು ಸವಾರರ ಸಮೇತ ರಸ್ತೆಗೆ ಬಿದ್ದು ಗಾಯಗೊಂಡವರನ್ನು ಪಿರ್ಯಾದಿದಾರರು ಉಪಚರಿಸಿ ಅಬೂಬಕ್ಕರ್ ರವರ ತಲೆಯಲ್ಲಿದ್ದ ಹೆಲ್ಮೆಟ್ ತೆಗೆದು ನೋಡಲಾಗಿ ಅವರ ಬಾಯಿ ಕಿವಿ ಮೂಗಿನಿಂದ ರಕ್ತ ಬರುತ್ತಿದ್ದು, ಬಳಿಕ ಠಾಣೆಗೆ ಮಾಹಿತಿ ನೀಡಿ ಅವರನ್ನು ಚಿಕಿತ್ಸೆ ಬಗ್ಗೆ ಇಲಾಖಾ ವಾಹನದಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಲ್ಲಿ ಅಲ್ಲಿನ ವೈದ್ಯರು ಪರೀಕ್ಷಿಸಿ ಅಬೂಬಕ್ಕರ್ ರವರು ಮೃತ ಪಟ್ಟಿರುವುದಾಗಿ ತಿಳಿಸಿರುತ್ತಾರೆ. ಅಲ್ಲದೇ ಆರೋಪಿ ವಾಹನ ಸವಾರನಿಗೂ ಕೂಡಾ ಗಂಭೀರ ಗಾಯವಾಗಿರುತ್ತದೆ ಈ ಬಗ್ಗೆ ಪುಂಜಾಲಕಟ್ಟೆ ಠಾಣಾ ಅ.ಕ್ರ 73/2021 ಕಲಂ: 279, 304 (ಎ) ಐಪಿಸಿ  ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಇತ್ತೀಚಿನ ನವೀಕರಣ​ : 16-10-2021 11:31 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080