ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: 2

ಬಂಟ್ವಾಳ ಸಂಚಾರ ಪೊಲೀಸ್ ಠಾಣೆ:  ಪಿರ್ಯಾದಿದಾರರಾದ ಮೊಹಮ್ಮದ್ ಆಝೀಮ್ ಪ್ರಾಯ:18 ವರ್ಷ ತಂದೆ: ಅಬ್ದುಲ್ ಖಾದರ್ ವಾಸ: 5/101(1) ಮನೆ , ಅಮ್ಮೆಮ್ಮಾರ್ ಮನೆ, ಪುದು ಗ್ರಾಮ, ಬಂಟ್ವಾಳ ತಾಲೂಕು ಎಂಬವರ ದೂರಿನಂತೆ ದಿನಾಂಕ: 15.01.2022 ರಂದು    KA-19-EY-0723 ನೇ ಮೋಟಾರ್ ಸೈಕಲನ್ನು ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಡೆಗೋಳಿ ಕಡೆಗೆ ಚಲಾಯಿಸಿಕೊಂಡು ಹೋಗುತ್ತಾ ಸಮಯ 14:45 ಗಂಟೆಗೆ ಬಂಟ್ವಾಳ ತಾಲೂಕು ಪುದು ಗ್ರಾಮದ ಮಾರಿಪಳ್ಳ ಎಂಬಲ್ಲಿಗೆ ತಲುಪಿದಾಗ ತನ್ನ ಎದುರಿನಿಂದ ಹೋಗುತ್ತಿದ್ದ KA-19 HE-6727 ನೇ ಆಕ್ಟೀವಾ ಸ್ಕೂಟರನ್ನು ಅದರ ಸವಾರ ಆದಂರವರು  ಯಾವುದೇ ಸೂಚನೆ ನೀಡದೇ ರಸ್ತೆಯ ಎಡಬದಿಯಿಂದ ಬಲಬದಿಯ ಡಿವೈಡರ್ ಕ್ರಾಸಿಂಗ್ ಕಡೆಗೆ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿ ಪಿರ್ಯಾದಿಯ ಮೋಟಾರ್ ಸೈಕಲಿಗೆ ಡಿಕ್ಕಿ ಹೊಡೆದು ಅಪಘಾತ ಪಡಿಸಿದ ಪರಿಣಾಮ ಎರಡೂ ದ್ವಿಚಕ್ರ ಸವಾರರು ವಾಹನ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಪಿರ್ಯಾದಿದಾರರು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆ ಬಗ್ಗೆ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದು, ಅಪಘಾತಪಡಿಸಿದ ಸ್ಕೂಟರ್ ಸವಾರ ಆದಂರವರು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಬಗ್ಗೆ ದಾಖಲಾಗಿರುವುದಾಗಿದೆ.  ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ಅ.ಕ್ರ. 05/2022 ಕಲಂ 279,337  ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಪುತ್ತೂರು ಸಂಚಾರ ಪೊಲೀಸ್ ಠಾಣೆ:  ಪಿರ್ಯಾದಿದಾರರಾದ ಅಮೃತ್ ಸಿ, ಪ್ರಾಯ 19 ವರ್ಷ ತಂದೆ: ಚಂದ್ರಹಾಸ, ವಾಸ: ಅಮೃತ ನಿಲಯ, ಕೆಇಬಿ ರಸ್ತೆ, ಆರ್ಟಿಒ ಕಛೇರಿ ಬಳಿ, ಬನ್ನೂರು ಅಂಚೆ ಮತ್ತು ಗ್ರಾಮ, ಪುತ್ತೂರು ತಾಲೂಕು ಎಂಬವರ ದೂರಿನಂತೆ ದಿನಾಂಕ 15-01-2022 ರಂದು 22-30 ಗಂಟೆಗೆ ಆರೋಪಿ  ಕಾರು ಚಾಲಕ ಜಗದೀಶ್ ಎಂಬವರು KA-21- N-3284  ನೋಂದಣಿ ನಂಬ್ರದ ಆಲ್ಟೋ ಕಾರನ್ನು ಪುತ್ತೂರು-ಉಪ್ಪಿನಂಗಡಿ ಸಾರ್ವಜನಿಕ ಡಾಮಾರು ರಸ್ತೆಯಲ್ಲಿ  ಬನ್ನೂರು ಕಡೆಯಿಂದ ಪುತ್ತೂರು ಕಡೆಗೆ ಚಲಾಯಿಸಿಕೊಂಡು ಹೋಗಿ, ಪುತ್ತೂರು ತಾಲೂಕು ಪುತ್ತೂರು ಕಸಬಾ ಗ್ರಾಮದ ಬೊಳ್ವಾರು ಎಂಬಲ್ಲಿ  ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ರಾಂಗ್‌ ಸೈಡಿಗೆ ಚಲಾಯಿಸಿದ ಪರಿಣಾಮ, ಪಿರ್ಯಾದುದಾರರ ತಂದೆ ಚಂದ್ರಹಾಸ ಎಂಬವರು ಪುತ್ತೂರು ಕಡೆಯಿಂದ ಬನ್ನೂರು ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ KA-21-Y-7629 ನೇ ನೋಂದಣಿ ನಂಬ್ರದ ಸ್ಕೂಟರಿಗೆ ಅಪಘಾತವಾಗಿ, ಚಂದ್ರಹಾಸರವರಿಗೆ ಮುಖಕ್ಕೆ, ಕೈಗೆ ಹಾಗೂ ಎದೆಗೆ ಗಾಯವಾಗಿ ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು, ಬಳಿಕ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ಎ.ಜೆ ಆಸ್ಪತ್ರೆಗೆ ದಾಖಲಿಸಿರುತ್ತಾರೆ. ಈ ಬಗ್ಗೆ ಪುತ್ತೂರು ಸಂಚಾರ ಠಾಣೆ  ಅ.ಕ್ರ:  08/2022 ಕಲಂ: 279,337 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಇತರೆ ಪ್ರಕರಣ: 1

ಸುಳ್ಯ ಪೊಲೀಸ್ ಠಾಣೆ : ದಿನಾಂಕ: 16.01.2022  ರಂದು ಸುಳ್ಯ ಪೊಲೀಸ್ ಠಾಣೆಯಲ್ಲಿ ಕಲಂ: 376(2)(f), 506 ಐಪಿಸಿ 5(n)(m)(l),6 POCSO Act  ನಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 17-01-2022 10:27 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080