ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: ೦1

ಬೆಳ್ತಂಗಡಿ ಸಂಚಾರ  ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ಶ್ರೀನಿವಾಸ ಲೋಕರೆ(45), ತಂದೆ: ಕೃಷ್ಣಾಜೀ ಲೋಕರೆ, ಮನೆ ನಂಬ್ರ: 1617/ಎ, ನಾಗರಕಲ್ಲು ಓಣಿ, ತಾಳಿಕೋಟೆ ತಾಲೂಕು, ವಿಜಯಪುರ ಎಂಬವರ ದೂರಿನಂತೆ ದಿನಾಂಕ: 16-04-2021 ರಂದು ತನ್ನ ಬಾಬ್ತು ಕೆಎ 28 ಎಮ್‌ 8701 ನೇ ಕಾರನ್ನು ಗುರುವಾಯನಕೆರೆ –ಕೊಟ್ಟಿಗೆಹಾರ ರಸ್ತೆಯಲ್ಲಿ ಕೊಟ್ಟಿಗೆಹಾರ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿರುವ  ಸಮಯ ಸುಮಾರು ಸಂಜೆ 5.30 ಗಂಟೆಗೆ ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ, ಚಾರ್ಮಾಡಿ ಘಾಟ್‌ನ 3 ನೇ ತಿರುವು ರಸ್ತೆಯ ಬಳಿ ತಲುಪುತ್ತಿದ್ದಂತೆ ಪಿರ್ಯಾದಿದಾರರ ವಿರುದ್ದ ಧಿಕ್ಕಿನಿಂದ ಅಂದರೆ ಕೊಟ್ಟಿಗೆಹಾರ ಕಡೆಯಿಂದ ಉಜಿರೆ ಕಡೆಗೆ ಕೆಎ 41 ಎ 5847 ನೇ ಕಾರನ್ನು ಅದರ ಚಾಲಕ ದುಡುಕುತನದಿಂದ ಚಲಾಯಿಸಿಕೊಂಡು ಬಂದು ಪಿರ್ಯಾದಿದಾರರ ಕಾರಿಗೆ ಢಿಕ್ಕಿ ಹೊಡೆದನು,  ಪರಿಣಾಮ ಎರಡು ಕಾರುಗಳು ಜಖಂಗೊಂಡು ಅಪಘಾತ ನಡೆಸಿದ ಕಾರಿನಲ್ಲಿದ್ದ ಸಹಪ್ರಯಾಣಿಕರಾದ ಮನು ಎಸ್‌ ಎನ್‌ ರವರಿಗೆ ಎಡ ಕೈ ಗೆ ಗುದ್ದಿದ ಗಾಯವಾಗಿರುತ್ತದೆ, ಗಾಯಳು ಚಿಕಿತ್ಸೆ ಬಗ್ಗೆ ಮಂಗಳೂರು ತೇಜಸ್ವಿನಿ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ. ಈ ಬಗ್ಗೆ ಬೆಳ್ತಂಗಡಿ ಸಂಚಾರ  ಠಾಣಾ ಅ.ಕ್ರ: 38/2021, ಕಲಂ; 279,337 ಭಾದಂಸಂ ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 18-04-2021 11:40 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080