ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: 1

ಬಂಟ್ವಾಳ ಸಂಚಾರ ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ಪದ್ಮನಾಭ ಪ್ರಾಯ;38 ವರ್ಷ ತಂದೆ;ಗಿರಿಯಪ್ಪ ಪೂಜಾರಿ ವಾಸ;ವಿಠಲಕೋಡಿ ಮನೆ, ಮಾಣಿ ಗ್ರಾಮ ಮತ್ತು ಅಂಚೆ ಬಂಟ್ವಾಳ ಎಂಬವರ ದೂರಿನಂತೆ ದಿನಾಂಕ;17.03.2021 ರಂದು ಪಿರ್ಯಾದಿದಾರರು ತನ್ನ  ಸಂಬಂಧಿಕರ ಮನೆಗೆ ನೇಮೋತ್ಸವಕ್ಕೆಂದು ತನ್ನ ಮಾವನವರಾದ ಧರ್ಣಪ್ಪ ಪೂಜಾರಿ ಹಾಗೂ  ಸೋಮಶೇಖರ ರವರೊಂದಿಗೆ ತನ್ನ ಪರಿಚಯದ ಚಿದಾನಂದ ರವರ ಬಾಬ್ತು KA 19 C 5269 ನೇ ಆಟೋರಿಕ್ಷಾವನ್ನು ಬಾಡಿಗೆಗೆ ಗೊತ್ತುಪಡಿಸಿ ಸಂಬಂಧಿಕರ ಮನೆಗೆ  ನೇಮೋತ್ಸವಕ್ಕೆ ಹೋಗುತ್ತಾ ಸಮಯ ಸುಮಾರು 21.15 ಗಂಟೆಗೆ ಬಂಟ್ವಾಳ ತಾಲೂಕು ಪಂಜಿಕಲ್ಲು ಗ್ರಾಮದ ಪಂಜಿಕಲ್ಲುಪದವು ಎಂಬಲ್ಲಿಗೆ ತಲುಪಿದಾಗ ತಿರುವು ರಸ್ತೆಯಲ್ಲಿ ರಿಕ್ಷಾವನ್ನು ಚಾಲಕ ಚಿದಾನಂದ ರವರು ಅತಿ ವೇಗ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ  ರಿಕ್ಷಾವು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಮರಿಗೆ ಬಿದ್ದು ಅಪಘಾತವಾಗಿರುತ್ತದೆ. ಈ ಅಪಘಾತದಲ್ಲಿ ಪ್ರಯಾಣಿಕರಾದ ಪಿರ್ಯಾದಿ ಪದ್ಮನಾಭ, ಧರ್ಣಪ್ಪ ಪೂಜಾರಿ ಯವರಿಗೆ ಗಾಯವಾಗಿದ್ದು, ಗಾಯಗೊಂಡ   ಗಾಯಾಳು ಚಿಕಿತ್ಸೆ ಬಗ್ಗೆ ಪದ್ಮನಾಭ ರವರು ವೆನ್ಲಾಕ್ ಆಸ್ಪತ್ರೆಯಲ್ಲಿ ಹಾಗೂ  ಧರ್ಣಪ್ಪ ಪೂಜಾರಿ ಯವರು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿ  ದಾಖಲಾಗಿರುವುದಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ಅ.ಕ್ರ. 30/2021 ಕಲಂ 279,337 ಐಪಿಸಿ  ಯಂತೆ ಪ್ರಕರಣ ದಾಖಲಾಗಿರುತ್ತದೆ.

 

 

ಅಸ್ವಾಭಾವಿಕ ಮರಣ ಪ್ರಕರಣ: 1

ಧರ್ಮಸ್ಥಳ ಪೊಲೀಸ್ ಠಾಣೆ : ಪಿರ್ಯಾಧಿದಾರರಾದ ಕೃಷ್ಣಕುಮಾರ್ ಪ್ರಾಯ:44 ವರ್ಷ ತಂದೆ; ಸುಬ್ರಹ್ಮಣ್ಯ ಭಟ್ ವಾಸ: ಕಾಟ್ಲ ಮನೆ  ಚಿಬಿದ್ರೆ ಗ್ರಾಮ ಬೆಳ್ತಂಗಡಿ ತಾಲೂಕು ಎಂಬವರ ದೂರಿನಂತೆ ಪಿರ್ಯಾದುದಾರರು ದಿನಾಂಕ: 18-03-2021 ರಂದು  ಬೆಳಿಗ್ಗೆ 8.45 ಗಂಟೆಗೆ ತೋಟದಲ್ಲಿ ಕೆಲಸ ಮಾಡಿಕೊಂಡಿರುವ ಸಮಯ ತೋಟದ ಹತ್ತಿರ ಹರಿಯುವ ನೆರಿಯಾ ಹೊಳೆಯಲ್ಲಿ ಯಾವುದೋ ವಸ್ತು ತೇಲುತ್ತಿದ್ದಂತೆ ಕಂಡು ಬಂದು ಹತ್ತಿರ ಹೋಗಿ ನೋಡಲಾಗಿ ಯಾರೋ ಅಪರಿಚಿತ ಗಂಡಸಿನ ಮೃತ ದೇಹ ತೇಲಾಡುತ್ತಿರುವುದು ಕಂಡು ಬಂದಿರುತ್ತದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಯುಡಿಆರ್ ನಂ:19/2021 ಕಲಂ:174 ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 19-03-2021 10:50 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080