ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: 1

 

ಪುತ್ತೂರು ಸಂಚಾರ ಪೊಲೀಸ್ ಠಾಣೆ: . ಪಿರ್ಯಾದಿದಾರರಾದ ಮೋಹನ ರಾಜ್, ಪ್ರಾಯ 24 ರ್ಷ, ತಂದೆ: ಪ್ರಕಾಶಂ,  ವಾಸ: ಕಾವು ಸಿಆರ್ಸಿ, ಮಾಡ್ನೂರು ಗ್ರಾಮ, ಕಾವು ಅಂಚೆ, ಪುತ್ತೂರು ತಾಲೂಕು ರವರು ನೀಡಿದ ದೂರಿನಂತೆ ದಿನಾಂಕ 18-04-2021 ರಂದು ಆರೋಪಿ ಸ್ಕೂಟರ್  ಸವಾರ ಅಬ್ದುಲ್ ಮಜೀದ್ ಎಂಬವರು KL-57-T-6924 ನೇ ನೋಂದಣಿ ನಂಬ್ರದ ಸ್ಕೂಟರನಲ್ಲಿ ಪ್ರಕಾಶ ಎಂಬವರನ್ನು ಸಹಸವಾರರನ್ನಾಗಿ ಕುಳ್ಳಿರಿಸಿಕೊಂಡು ಕಾವು ಕಡೆಯಿಂದ ಕರಾಯ ಕಡೆಗೆ ಚಲಾಯಿಸಿಕೊಂಡು ಹೋಗಿ, ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ಪೆದಮಲೆ ಎಂಬಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಸ್ಕೂಟರ್ ಅಬ್ದುಲ್ ಮಜೀದ್ ರವರ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ, ಇಬ್ಬರೂ  ಸ್ಕೂಟರ್ ಸಮೇತ ರಸ್ತೆಗೆ ಬಿದ್ದು, ಸವಾರ ಅಬ್ದುಲ್ ಮಜೀದ್ ರವರಿಗೆ  ಬಲಕೈ ಹಾಗೂ  ತಲೆಗೆ ಗುದ್ದಿದ ಹಾಗೂ ರಕ್ತಗಾಯ ಮತ್ತು ಪ್ರಕಾಶ ರವರಿಗೆ ತಲೆಗೆ ಹಾಗೂ ಎಡಕಾಲಿಗೆ ಗುದ್ದಿದ ಹಾಗೂ ರಕ್ತಗಾಯಗಳಾಗಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿರುವುದಾಗಿದೆ. ಈ ಬಗ್ಗೆ ಪುತ್ತೂರು ಸಂಚಾರ ಠಾಣೆ  ಅ.ಕ್ರ:  76/2021 ಕಲಂ: 279, 337  ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಜೀವಬೆದರಿಕೆ ಪ್ರಕರಣ: 1

 

ಬಂಟ್ವಾಳ ನಗರ ಪೊಲೀಸ್ ಠಾಣೆ : ಪಿರ್ಯಾದಿದಾರರಾದ ಜೋಯ್ಸ್ ಪಾಯಸ್ ಪ್ರಾಯ: 45 ವರ್ಷ ತಂದೆ: ಲೂಯಿಸ್ ಪಾಯಸ್ ವಾಸ: ಗುತ್ತಾರ್ ಮನೆ, ಅಮ್ಟಾಡಿ ಗ್ರಾಮ ಬಂಟ್ವಾಳ ತಾಲೂಕು ರವರು ನೀಡಿದ ದೂರಿನಂತೆ ದಿನಾಂಕ:19-04-2021 ರಂದು ಪಿರ್ಯಾದಿದಾರರ ನೆರೆಮನೆಯ ಅಬ್ರಾಹಂ ಸಿಕ್ವೇರಾ ರವರ ಮಗ ಜೆರಾಲ್ಡ್ ಸಿಕ್ವೇರಾರವರು ವಿಪರೀತ ಕುಡಿದುಕೊಂಡು  ಪಿರ್ಯಾದಿದಾರರ ಮನೆಯ ಅಂಗಳಕ್ಕೆ ತಲವಾರು ಹಿಡಿದುಕೊಂಡು ಬಂದು ಹೊರಗೆ ಬಾ ನಿನ್ನನ್ನು ಕಡಿಯದೇ ಇಲ್ಲಿಂದ ಹೋಗಲ್ಲ ನಿನ್ನ ರಕ್ತ ನೋಡಿಯೇ ಇವತ್ತು ಇಲ್ಲಿಂದ ಹೋಗುವುದು. ನಾನು ಸಾಯುವುದಕ್ಕಿಂತ ಮುಂಚೆ ನಿನ್ನನ್ನು ಸಾಯಿಸದೇ ಬಿಡಲ್ಲ ಎಂಬುದಾಗಿ ಕೆಟ್ಟ ಶಬ್ದಗಳಿಂದ ಬೈದು ಜೀವ ಬೆದರಿಕೆಯೊಡ್ಡಿರುತ್ತಾರೆ ಈ ಬಗ್ಗೆ ಬಂಟ್ವಾಳ ನಗರ ಠಾಣಾ ಅ/ಕ್ರ 46/2021 ಕಲಂ:447,504,506  ಐಪಿಸಿ. ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 21-04-2021 10:57 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080