ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: 2

 

ಪುತ್ತೂರು ಸಂಚಾರ ಪೊಲೀಸ್ ಠಾಣೆ: . ಪಿರ್ಯಾದಿದಾರರಾದ ಬಾಲಕೃಷ್ಣ ನಾಯ್ಕ ಕೆ, ಪ್ರಾಯ 63 ವರ್ಷ, ತಂದೆ:  ಅಣ್ಣು ನಾಯ್ಕ ಕೆ ವಾಸ: ಜೀವಿಕಾ ನಿಲಯ, ತೆಂಕಿಲ ಬೈಪಾಸ್‌ ರಸ್ತೆ, ಪುತ್ತೂರು ಕಸಬಾ ಗ್ರಾಮ, ಪುತ್ತೂರು ತಾಲೂಕು  ರವರು ನೀಡಿದ ದೂರಿನಂತೆ ದಿನಾಂಕ 23-03-2021 ರಂದು ಆರೋಪಿ  ಕಾರು ಚಾಲಕ ಹರಿಪ್ರಸಾದ್ ಎಂಬವರು KA-19-N-1554 ನೇ ನೋಂದಣಿ ನಂಬ್ರದ ಕಾರನ್ನು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಳ್ಯ ಕಡೆಯಿಂದ ಮಾಣಿ ಕಡೆಗೆ ಚಲಾಯಿಸಿಕೊಂಡು ಹೋಗಿ, ಪುತ್ತೂರು ತಾಲೂಕಿನ ಪುತ್ತೂರು ಕಸಬಾ ಗ್ರಾಮದ ತೆಂಕಿಲ ಅಭಯ ಮಾರ್ಬಲ್ನ ಎದುರು ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಹೆದ್ದಾರಿಯ ತೀರಾ ಬಲಬದಿಗೆ ಚಲಾಯಿಸಿದ ಪರಿಣಾಮ, ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಿಯಾದುದಾರರಿಗೆ ಕಾರು ಅಪಘಾತವಾಗಿ ಪಿರ್ಯಾದುದಾರರು ರಸ್ತೆಗೆ ಬಿದ್ದು, ಎಡ ಕೋಲು ಕೈಗೆ ಮೂಳೆ ಮುರಿತದ ಗಾಯ, ಎಡ ಬದಿ ಪಕ್ಕೆಲುಬು ಮೂಳೆ ಮುರಿತ, ಬಲ ಕೋಲುಕಾಲಿಗೆ, ಸೊಂಟಕ್ಕೆ ಗುದ್ದಿದ ನೋವು, ಕೈಗಳಿಗೆ ಹಾಗೂ ಗದ್ದಕ್ಕೆ ತರಚಿದ ಗಾಯವಾಗಿ, ಪುತ್ತೂರು ದನ್ವಂತರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುತ್ತಾರೆ. ಈ ಬಗ್ಗೆ ಪುತ್ತೂರು ಸಂಚಾರ ಠಾಣೆ  ಅ.ಕ್ರ:  51/2021 ಕಲಂ: 279, 338 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಪುತ್ತೂರು ಸಂಚಾರ ಪೊಲೀಸ್ ಠಾಣೆ: . ಪಿರ್ಯಾದಿದಾರರಾದ ಅನಂತ ನಾರಾತಣ ಕೆ, ಪ್ರಾಯ 45 ವರ್ಷ, ತಂದೆ: ಸುಬ್ರಮಣ್ಯ ಭಟ್‌ ವಾಸ: ಬಲಮುರಿ ದೇವಸ್ಥಾನದ ಬಳಿ, ಕರ್ಮಲ, ಬನ್ನೂರು ಗ್ರಾಮ, ಪುತ್ತೂರು ತಾಲೂಕು ರವರು ನೀಡಿದ ದೂರಿನಂತೆ ದಿನಾಂಕ 20-03-2021 ರಂದು ಆರೋಪಿ  ಹೆಸರು ತಿಳಿದು ಬಾರದ ಮೋಟಾರ್ ಸೈಕಲ್ ಸವಾರ ನೋಂದಣಿ ನಂಬ್ರ ತಿಳಿದು ಬಾರದ ಮೋಟಾರ್ ಸೈಕಲನ್ನು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಳ್ಯ ಕಡೆಯಿಂದ ಮಂಗಳೂರು ಕಡೆಗೆ ಚಲಾಯಿಸಿಕೊಂಡು ಹೋಗಿ, ಪುತ್ತೂರು ತಾಲೂಕಿನ ಪುತ್ತೂರು ಕಸಬಾ ಗ್ರಾಮದ ತೆಂಕಿಲ ಎಂಬಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಪಿರ್ಯಾದುದಾರರು KA-19-EA-4059 ನೇ ನೋಂದಣಿ ನಂಬ್ರದ ಮೋಟಾರ್ ಸೈಕಲನ್ನು ದೇವಸ್ಯ ಕಡೆಯಿಂದ ಪುತ್ತೂರು ಕಡೆಗೆ ಚಲಾಯಿಸಿಕೊಂಡು ಹೋಗಿ ತೆಂಕಿಲ ಬಳಿ ಇಂಡಿಕೇಟರ್ ಹಾಕಿ ಪುತ್ತೂರು ಪೇಟೆ ಕಡೆಗೆ ಹೋಗಲು ನಿಧಾನವಾಗಿ ಚಲಾಯಿಸಿಕೊಂಡು ಹೊಗುತ್ತಿದ್ದ ಸಮಯ ಹಿಂದಿನಿಂದ ಅಪಘಾತವಾಗಿ ಪಿರ್ಯಾದುದಾರರು ಮೋಟಾರ್ ಸೈಕಲ್ ಸಮೇತ ರಸ್ತೆಗೆ ಬಿದ್ದು, ತಲೆಗೆ, ಬಲ ಹಾಗೂ ಎಡ ಕಾಲಿನ ಮೊಣಕಾಲುಗಳಿಗೆ, ಎಡ ಕೈಯ ಬೆರಳುಗಳಿಗೆ ಗುದ್ದಿದ ಹಾಗೂ ರಕ್ತಗಾಯಗಳಾಗಿ, ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಗೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಎ ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುತ್ತಾರೆ ಈ ಬಗ್ಗೆ ಪುತ್ತೂರು ಸಂಚಾರ ಠಾಣೆ  ಅ.ಕ್ರ:  52/2021 ಕಲಂ: 279, 337 ಐಪಿಸಿ ಮತ್ತು 134(ಎ&ಬಿ) ಐಎಂವಿ ಕಾಯ್ದೆ  ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಅಸ್ವಾಭಾವಿಕ ಮರಣ ಪ್ರಕರಣ: 1

 

ಸುಳ್ಯ ಪೊಲೀಸ್ ಠಾಣೆ : ಪಿರ್ಯಾದಿದಾರರಾದ ಶ್ರೀಮತಿ ದಿವ್ಯ ಕುಮಾರಿ ಪ್ರಾಯ 26 ವರ್ಷ ಗಂಡ ಮಹೇಂದ್ರನ್ ನಾಗಪಟ್ಟಣ ಮನೆ ಆಲೆಟ್ಟಿ ಗ್ರಾಮ. ಸುಳ್ಯ ತಾಲೂಕು ರವರ ಗಂಡ ಮಹೇಂದ್ರ ಎಂಬವರಿಗೆ ಬಾಲ್ಯದಿಂದಲೇ ಹೃದಯ ಸಂಬಂಧಿ ಖಾಯಿಲೆ ಇದ್ದು, ಮಂಗಳೂರು ಮತ್ತು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿದೆ. ದಿನಾಂಕ  23.03.2021 ರಂದು ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದ ನಾಗಪಟ್ಟಣ ಎಂಬಲ್ಲಿ ಮನೆಯಲ್ಲಿ ರಾತ್ರಿ ಮಲಗಿರುವ  ಸಮಯ ಪಿರ್ಯಾದುದಾರರ ಗಂಡ ವಾಂತಿ ಮಾಡಿದ್ದು, ಕೂಡಲೇ ಒಂದು ಅಂಬ್ಯಲೆನ್ಸ್ ನಲ್ಲಿ ಚಿಕಿತ್ಸೆ ಬಗ್ಗೆ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದಲ್ಲಿ ವೈದ್ಯರು ಪರೀಕ್ಷಿಸಿ ಪಿರ್ಯಾದುದಾರರ ಗಂಡ ಮಹೇಂದ್ರರವರು ಮೃತಪಟ್ಟಿರುವುದಾಗಿ ತಿಳಿಸಿದ್ದು, ಪಿರ್ಯಾದುದಾರರ ಗಂಡ  ಮಹೇಂದ್ರನ್ ಅವರಿಗಿದ್ದ ಹೃದಯ ಸಂಬಂಧಿ ಖಾಯಿಲೆಯಿಂದ  ಅಥವಾ ಹೃದಯಾಘಾತದಿಂದ ಮೃತಪಟ್ಟಿರುವುದಾಗಿದೆ ಈ ಬಗ್ಗೆ ಸುಳ್ಯ ಪೊಲೀಸ್‌ ಠಾಣಾ ಯುಡಿಅರ್‌ ನಂಬ್ರ 14/20201 ಕಲಂ 174ಸಿಆರ್‌ಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 24-03-2021 04:00 PM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080