ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: 1

  • ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ದೇಜಪ್ಪ ಗೌಡ (56), ತಂದೆ: ಅಣ್ಣು ಗೌಡ, ವಾಸ: ಶ್ರೀದೇವಿ ನಿಲಯ, ಕುಂಡಡ್ಕ ಮನೆ, ನಾವೂರು ಗ್ರಾಮ, ಬೆಳ್ತಂಗಡಿ ಎಂಬವರ ದೂರಿನಂತೆ ದಿನಾಂಕ: 25-01-2022 ರಂದು ಲಿಂಗಪ್ಪ ಗೌಡ ಎಂಬವರು ಕೆಎ 21 ಎ 5988  ನೇ ಆಟೋ ರಿಕ್ಷಾದ ಹಿಂದಿನ ಸೀಟಿನಲ್ಲಿ ಸಹಪ್ರಯಾಣಿಕನಾಗಿ ಕುಳಿತುಕೊಂಡು ಆಟೋ ರಿಕ್ಷಾವನ್ನು ಚಾಲಕ ಸಾಂತಪ್ಪ ಎಂಬವರು ನಾವೂರು ಕಡೆಯಿಂದ ಲಾಯಿಲಾ ಕಡೆಗೆ ಚಲಾಯಿಸಿಕೊಂಡು ಬರುತ್ತಾ ಸಮಯ ಸುಮಾರು ಮದ್ಯಾಹ್ನ 2.30 ಗಂಟೆಗೆ ಬೆಳ್ತಂಗಡಿ ತಾಲೂಕು ನಡ ಗ್ರಾಮದ ಕೆಲ್ತಾಜೆ ಎಂಬಲ್ಲಿ ದುಡುಕುತನದಿಂದ ರಿಕ್ಷಾವನ್ನು ಚಲಾಯಿಸಿ ಚಾಲಕನ ಚಾಲನ ಹತೋಟಿ ತಪ್ಪಿ ಆಟೋ ರಿಕ್ಷಾ ಎಡ ಮಗ್ಗುಲಾಗಿ ಮಗುಚಿ ಬಿದ್ದ ಪರಿಣಾಮ ಆಟೋ ರಿಕ್ಷಾದಲ್ಲಿದ್ದ ಸಹಪ್ರಯಾಣಿಕರಾದ ಲಿಂಗಪ್ಪ ಗೌಡ ಎಂಬವರಿಗೆ ಎದೆಗೆ, ತಲೆಗೆ ಗುದ್ದಿದ ರಕ್ತಗಾಯವಾಗಿರುತ್ತದೆ, ಗಾಯಾಳು ಚಿಕಿತ್ಸೆ ಬಗ್ಗೆ ಮಂಗಳೂರು ಕೆಎಮ್‌ಸಿ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.ಈ ಬಗ್ಗೆ ಬೆಳ್ತಂಗಡಿ ಸಂಚಾರ  ಠಾಣಾ ಅ.ಕ್ರ: 15/2022 ಕಲಂ; 279,337 ಭಾದಂಸಂ. ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಇತರೆ ಪ್ರಕರಣ: 1

  • ಸುಬ್ರಮಣ್ಯ ಪೊಲೀಸ್ ಠಾಣೆ : ದಿನಾಂಕ: 26-01-2022 ರಂದು ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂಬ್ರ  : 10-2022 ಕಲಂ: 448, 323,504,506 r/w 34  IPC  ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಅಸ್ವಾಭಾವಿಕ ಮರಣ ಪ್ರಕರಣ: 1

  • ಉಪ್ಪಿನಂಗಡಿ ಪೊಲೀಸ್ ಠಾಣೆ : ಪಿರ್ಯಾಧಿದಾರರಾದ ಝುಬೈದ್ ಗಂಡ:ಮೊಹಮ್ಮದ್ ಶರೀಫ್ ವಾಸ:ಸಹನಾ ಕಂಪೌಂಡ್ 34ನೇ ನೆಕ್ಕಿಲಾಡಿ ಗ್ರಾಮ ಪುತ್ತೂರು ತಾಲೂಕು ಎಂಬವರ ದೂರಿನಂತೆ ಪಿರ್ಯಾದಿದಾರರ  ಗಂಡ ಮೊಹಮ್ಮದ್‌ ಶರೀಪ್‌  ಪ್ರಾಯ  33 ವರ್ಷ  ರವರು ಪೈಂಟಿಂಗ್‌ ಕೆಲಸ ಮಾಡಿಕೊಂಡಿದ್ದು   ವಿಪರೀತ ಸಾಲದ ಬಾದೆಯಿಂದ ಮದ್ಯಪಾನ  ಮಾಡುತ್ತಿದ್ದು ವಿಪರೀತ ಮದ್ಯಪಾನದ ಚಟ ಹೊಂದಿದ್ದು, ದಿನಾಂಕ:  25-01-2022ರಂದು  ಬೆಳಿಗ್ಗೆ  11.30 ಗಂಟೆಯಿಂದ ದಿನಾಂಕ:  26-01-2022ರ  13.00ಗಂಟೆಯ ಮದ್ಯದ ಅವಧಿಯಲ್ಲಿ ಉಪ್ಪಿನಂಗಡಿಯ ಲಾಡ್ಜ್‌ ನಲ್ಲಿ   ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ಯುಡಿಆರ್ ನಂಬ್ರ 03/2022 ಕಲಂ:174 CRPC  ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 27-01-2022 10:03 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080