ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: 2

 

ಉಪ್ಪಿನಂಗಡಿ ಪೊಲೀಸ್ ಠಾಣೆ: . ಪಿರ್ಯಾದಿದಾರರಾದ ಜಯರಾಮ ಶೆಟ್ಟಿ ನಿ (33) ತಂದೆ;ದಿ|| ಮಹಾಬಲ ಶೆಟ್ಟಿ ವಾಸ:ಪಾದೆಮನೆ ಗೋಳಿತೊಟ್ಟು ಗ್ರಾಮ ಕಡಬ ತಾಲೂಕು ರವರು ದಿನಾಂಕ:26.04.2021 ರಂದು ಅವರ ಬಾಬ್ತು ಓಮ್ನಿ ಕಾರು ನಂಬ್ರ KA-01-P-6422 ನೇದರಲ್ಲಿ ಚಾಲಕನಾಗಿ ಅರಸಿನಮಕ್ಕಿಯಲ್ಲಿ ನಡೆಯುವ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ಗುಲಾಬಿ, ಸುನಂದ, ರೇಖಾ, ಪದ್ಮಾವತಿ, ರಿತ್ವಿಕ್ ಶೆಟ್ಟಿ,ವೇದಾವತಿ ಹಾಗೂ ನೀತಾರವರನ್ನು ಓಮ್ನಿ ಕಾರಿನಲ್ಲಿ ಕೂರಿಸಿಕೊಂಡು ಅರಸಿನಮಕ್ಕಿ ಕಡೆ ಕಾರನ್ನು ಚಲಾಯಿಸಿಕೊಂಡು ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಕಾಫಿನಬಾಗಿಲು ಎಂಬಲ್ಲಿಗೆ ಬೆಳಿಗ್ಗೆ 11-00 ಗಂಟೆಗೆ ತಲುಪುತ್ತಿದ್ದಂತೆ ಧರ್ಮಸ್ಥಳ ಕಡೆಯಿಂದ ಕೊಕ್ಕಡ ಕಡೆಗೆ ಬರುತ್ತಿದ್ದ ಕಾರು ನಂಬ್ರ KA-18-Z-1855 ನೇದನ್ನು ಅದರ ಚಾಲಕನು ತೀರಾ ನಿರ್ಲಕ್ಷತನ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ರಸ್ತೆಯ ವಿರುಧ್ಧ ದಿಕ್ಕಿಗೆ ಬಂದು ಫಿರ್ಯಾಧಿದಾರರ ಓಮ್ನಿ ಕಾರಿಗೆ ಡಿಕ್ಕಿ ಹೊಡೆದಾಗ ಓಮ್ನಿ ಕಾರು ರಸ್ತೆಯ ಬಲಬದಿಗೆ ಮಗುಚಿ ಬಿದ್ದ ಪರಿಣಾಮ ಓಮ್ನಿ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪುತ್ತೂರು ಸರ್ಕಾರಿ ಆಸ್ಪತ್ರೆ ಹಾಗೂ ಉಜಿರೆಯ SDM ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆಯಲ್ಲಿರುತ್ತಾರೆ. ಫಿರ್ಯಾಧಿದಾರರಿಗೆ ಯಾವುದೇ ಗಾಯಗಳಾಗಿರುವುದಿಲ್ಲ ಈ ಅಪಘಾತದಿಂದ ಎರಡು ವಾಹನಗಳು ಜಖಂ ಆಗಿದ್ದು ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣಾ ಅ.ಕ್ರ 38/2021 ಕಲಂ: 279,337 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಪುತ್ತೂರು ಸಂಚಾರ ಪೊಲೀಸ್ ಠಾಣೆ: . ಪಿರ್ಯಾದಿದಾರರಾದ ಫ್ರಾನ್ಸಿಸ್ ಪ್ರಶಾಂತ್ ಡಿʼಸೋಜ,  ಪ್ರಾಯ 34 ರ್ಷ, ತಂದೆ: ಫೆಲಿಕ್ಸ್ ಡಿʼಸೋಜ,  ವಾಸ: 2-333, ಕುಟಿನೋಪಿನಡ್ಕ ಮನೆ, ಕುಂಬ್ರ ಅಂಚೆ, ಒಳಮೊಗ್ರು ಗ್ರಾಮ, ಪುತ್ತೂರು ತಾಲೂಕು ರವರು ನೀಡಿದ ದೂರಿನಂತೆ ದಿನಾಂಕ 26-04-2021 ರಂದು ಆರೋಪಿ ಅಟೋರಿಕ್ಷಾ ಚಾಲಕ ಫೆಲಿಕ್ಸ್ ಡಿʼಸೋಜ ಎಂಬವರು KA-21-C-0368 ನೇ ನೋಂದಣಿ ನಂಬ್ರದ ಅಟೋರಿಕ್ಷಾವನ್ನು ನೆಲ್ಲಿಕಟ್ಟೆ ಸಾರ್ವಜನಿಕ ರಸ್ತೆಯಲ್ಲಿ ಬಸ್ ನಿಲ್ದಾಣ ಕಡೆಯಿಂದ ಪುತ್ತೂರು ಸಿಟಿ ಆಸ್ಪತ್ರೆ ಕಡೆಗೆ ಚಲಾಯಿಸಿಕೊಂಡು ಹೋಗಿ, ಪುತ್ತೂರು ತಾಲೂಕು ಪುತ್ತೂರು ಕಸಬಾ ಗ್ರಾಮದ ರಾಮಕೃಷ್ಣ ಆಶ್ರಮದ ಬಳಿ ಇಳಿಜಾರು ರಸ್ತೆಯಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಅಟೋರಿಕ್ಷಾ ಹತೋಟಿ ತಪ್ಪಿ ರಸ್ತೆ ಬದಿಯ ಮರಕ್ಕೆ ಅಪಘಾತವಾಗಿ ಚಾಲಕ ಫೆಲಿಕ್ಸ್ ಡಿʼಸೋಜ ರವರಿಗೆ ಬಲಕಾಲಿನ ತೊಡೆಗೆ ಗುದ್ದಿದ ಒಳಗಾಯವಾಗಿದ್ದು, ಚಿಕಿತ್ಸೆ ಬಗ್ಗೆ ಪುತ್ತೂರು ಸಿಟಿ ಆಸ್ಪತ್ರೆಗೆ ದಾಖಲಾಗಿರುತ್ತಾರೆ ಈ ಬಗ್ಗೆ ಪುತ್ತೂರು ಸಂಚಾರ ಠಾಣೆ  ಅ.ಕ್ರ:  79/2021 ಕಲಂ: 279, 337  ಐಪಿಸಿ  ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 27-04-2021 10:46 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080