ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: 1

  • ಪುತ್ತೂರು ಸಂಚಾರ ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ಗೋಪಾಲಕೃಷ್ಣ ಭಟ್‌, ಪ್ರಾಯ 52 ವರ್ಷ, ತಂದೆ: ರಾಮಚಂದ್ರ ಅಸ್ರಣ್ಣ ವಾಸ: ಸುಭದ್ರ ಕಲ್ಯಾಣ ಮಂಟಪದ ಹತ್ತಿರ, ಮುಕ್ರಂಪಾಡಿ, ಕೆಮ್ಮಿಂಜೆ ಗ್ರಾಮ, ಪುತ್ತೂರು ಎಂಬವರ ದೂರಿನಂತೆ ದಿನಾಂಕ 31-07-2022 ರಂದು 08-30 ಗಂಟೆಗೆ ಆರೋಪಿ ಮೋಟಾರ್‌ ಸೈಕಲ್‌ ಸವಾರ ದಿನಮಣಿ ನಾರಾಯಣ ಭಟ್‌  ಎಂಬವರು KA-21- S-7666  ನೇ ನೋಂದಣಿ ನಂಬ್ರದ ಮೋಟಾರ್‌ ಸೈಕಲನ್ನು ಪುತ್ತೂರು-ಎಪಿಎಂಸಿ  ಸಾರ್ವಜನಿಕ ಡಾಮಾರು ರಸ್ತೆಯಲ್ಲಿ ಎಪಿಎಂಸಿ ಕಡೆಯಿಂದ ಪುತ್ತೂರು ಮುಖ್ಯ ರಸ್ತೆ ಕಡೆಗೆ ಚಲಾಯಿಸಿಕೊಂಡು ಹೋಗಿ, ಪುತ್ತೂರು ತಾಲೂಕು ಪುತ್ತೂರು ಕಸಬಾ  ಗ್ರಾಮದ ಎಪಿಎಂಸಿ ರಸ್ತೆಯ ಐಡಿಯಲ್‌ ಲ್ಯಾಬ್‌ ಬಳಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಪಿರ್ಯಾದುದಾರರಾದ ಕೆ.ಎಸ್‌. ಗೋಪಾಲಕೃಷ್ಣ ಭಟ್‌  ರವರು ಸವಾರರಾಗಿ ಮುಕ್ರಂಪಾಡಿ ಕಡೆಯಿಂದ ಬೆಳ್ಳಿಪ್ಪಾಡಿ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ  KA-21-W-1591 ನೇ ನೋಂದಣಿ ನಂಬ್ರದ ಸ್ಕೂಟರಿಗೆ ಅಪಘಾತವಾಗಿ, ಪಿರ್ಯಾದುದಾರರು ಸ್ಕೂಟರ್‌ ಸಮೇತ ರಸ್ತೆಗೆ  ಬಿದ್ದು, ಪಿರ್ಯಾದುದಾರರ ಬಲಕಾಲಿನ ಪಾದಕ್ಕೆ  ರಕ್ತ ಗಾಯವಾಗಿ,  ಪುತ್ತೂರು ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಗ್ಗೆ ದಾಖಲಾಗಿರುತ್ತಾರೆ.  ಆರೋಪಿ ಸವಾರ ಗಾಯಾಳುವನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸದೇ ಮತ್ತು ಪೊಲೀಸ್‌ ಠಾಣೆಗೆ ಮಾಹಿತಿ ನೀಡದೇ ಹೋಗಿರುತ್ತಾರೆ. ಈ ಬಗ್ಗೆ ಪುತ್ತೂರು ಸಂಚಾರ ಠಾಣೆ ಅ.ಕ್ರ:  125/2022  ಕಲಂ: 279, 337 ಐಪಿಸಿ &134(A&B)IMV Act.ಯಂತೆ ಪ್ರಕರಣ ದಾಖಲಾಗಿರುತ್ತದೆ.

 

 

ಹಲ್ಲೆ ಪ್ರಕರಣ: 1

  • ಉಪ್ಪಿನಂಗಡಿ ಪೊಲೀಸ್ ಠಾಣೆ : ಪಿರ್ಯಾಧಿದಾರರಾದ ನ್ಯಾನ್ಸಿ ಲುವಿನೋ ಪಿಂಟೋ (32) ಗಂಡ;ಜಾನ್ಸನ್ ಗಲ್ಬವೋ ವಾಸ:ಅಂಕದಮಜಲು ಮನೆ ಕೌಕ್ರಾಡಿ ಗ್ರಾಮ ಕಡಬ ತಾಲೂಕು ಎಂಬವರ ದೂರಿನಂತೆ ದಿನಾಂಕ:31.07.2022 ರಂದು ಸಂಜೆ 4.00 ಗಂಟೆಯ ಸಮಯ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಅಂಕದಮಜಲು ಎಂಬಲ್ಲಿ ಫಿರ್ಯಾಧಿದಾರರ ಗಂಡ ಜಾನ್ಸನ್ (32) ಎಂಬವರು ಶಿವಪ್ರಸಾದ ಎಂಬವರ ಗೇಟಿನ ಬಳಿಯಿಂದ ಅವರ ಮನೆಗೆ ಹೋಗುವ ರಸ್ತೆಗೆ ನೀರು ಬರದಂತೆ ಕೆಂಪು ಕಲ್ಲನ್ನು ಇಡುತ್ತಿದ್ದಾಗ ಫಿರ್ಯಾಧಿದಾರರ ಗಂಡನಿಗೆ ಆರೋಪಿತ ಶಿವಪ್ರಸಾದ್ ಎಂಬವರು ಹಿಂದಿನಿಂದ ಕಬ್ಬಿಣದ ರಾಡಿನಿಂದ ಹೊಡೆದು ರಕ್ತಗಾಯಗೊಳಿಸಿದ್ದು, ರಕ್ತಗಾಯಗೊಂಡ ಜಾನ್ಸನ್ ರವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುತ್ತಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ಅ.ಕ್ರ 83/2022 ಕಲಂ: 324 ಭಾದಂಸಂ  ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 01-08-2022 10:07 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080