ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: 1

 • ಬಂಟ್ವಾಳ ಸಂಚಾರ ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ಗಿರೀಶ್ ರಾವ್ (50) ವರ್ಷ ತಂದೆ : ದಿ || ಆನಂದ ರಾವ್ ವಾಸ : 1-279/1 ತಾರಾಬರಿ ಮನೆ, ಅಮ್ಟೂರು ಗ್ರಾಮ, ಕರಿಂಗಾನ ಅಂಚೆ ಬಂಟ್ವಾಳ ಎಂಬವರ ದೂರಿನಂತೆ ಪಿರ್ಯಾದಿದಾರರು KA-19ES-0796 ನೇ ಸ್ಕೂಟರಿನಲ್ಲಿ ಕೆಲಸದ ನಿಮಿತ್ತ ಅಮ್ಟೂರು ಕಡೆಯಿಂದ ನೇರಳಕಟ್ಟೆ ಕಡೆಗೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸವಾರಿ ಮಾಡಿಕೊಂಡು ಹೋಗುತ್ತಾ ಸಮಯ ಸುಮಾರು ಬೆಳಿಗ್ಗೆ 10.00 ಗಂಟೆಗೆ ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಎಂಬಲ್ಲಿಗೆ ತಲುಪಿದಾಗ ಮಾಣಿ ಕಡೆಯಿಂದ KA-04ME-5376 ನೇ ಕಾರನ್ನು ಅದರ ಚಾಲಕ ಬದುದ್ದೀನ್ ರವರು ದುಡುಕುತನ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು ಪಿರ್ಯಾದಿದಾರರ ಸ್ಕೂಟರಿಗೆ ಡಿಕ್ಕಿ ಹೊಡೆದು ಅಪಘಾತಪಡಿಸಿದ ಪರಿಣಾಮ ಪಿರ್ಯಾದಿದಾರರು ಸ್ಕೂಟರ್ ಸಮೇತಾ ರಸ್ತೆಗೆ ಬಿದ್ದು ಎರಢೂ ಕಾಲಿಗೆ. ತೊಡೆಗೆ, ಬಲ ಹಣೆಗೆ, ಬಲಭುಜಕ್ಕೆ, ಎಡ ಕೈಗೆ ಗುದ್ದಿದ ಹಾಗೂ ರಕ್ತ ಗಾಯ ಗೊಂಡವರು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಷಿನ ಚಿಕಿತ್ಸೆ ಬಗ್ಗೆ ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುವುದಾಗಿದೆ.ಈ ಬಗ್ಗೆ ಬಂಟ್ವಾಳ ಸಂಚಾರ ಅ.ಕ್ರ 67/2022 ಕಲಂ: 279, 337 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

 

ಇತರೆ ಪ್ರಕರಣ: 2

 • ವಿಟ್ಲ ಪೊಲೀಸ್ ಠಾಣೆ : ಪಿರ್ಯಾಧಿದಾರರಾದ ಅಬ್ದುಲ್‌ ರಹಿಮಾನ್‌ ವಾಸ:ಕಂಬಳಬೆಟ್ಟು ಮನೆ ವಿಟ್ಲ ಮುಡ್ನೂರು ಗ್ರಾಮ ಬಂಟ್ವಾಳ ಎಂಬವರ ದೂರಿನಂತೆ ದಿನಾಂಕ: 06-06-2022 ರಂದು 11.00 ಗಂಟೆಗೆ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ವಿಟ್ಲ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದ ಬಳಿ ಅಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ರಾಧಾಕೃಷ್ಣ ಅಡ್ಯಂತಾಯ ಎಂಬವರು   ಸಮಾಜದಲ್ಲಿ ಅಶಾಂತಿ ಉಂಟಾಗಿ ಸಮಾಜದ ಸಾಮರಸ್ಯಕ್ಕೆ ದಕ್ಕೆ ಉಂಟಾಗುವ ರೀತಿಯಲ್ಲಿ ಭಾಷಣ ಮಾಡಿರುವುದಾಗಿ ನೀಡಿದ ದೂರಿನಂತೆ ವಿಟ್ಲ ಪೊಲೀಸ್‌ ಠಾಣಾ ಅ.ಕ್ರ 90/2022  ಕಲಂ: 505(2) ಜೊತೆಗೆ 34  ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

 • ಬೆಳ್ತಂಗಡಿ ಪೊಲೀಸ್ ಠಾಣೆ : ದಿನಾಂಕ: 22-05-2022 ರಂದು ಸಾಮಾಜಿಕ ಜಾಲತಾಣದಲ್ಲಿ ಬೆಳ್ತಂಗಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿರುವ ಖಾಸಗಿ ಕಾಲೇಜೊಂದರ ಬಗ್ಗೆ ಅಪಪ್ರಚಾರ ಮಾಡಿರುವುದಾಗಿ ಸದರಿ ಕಾಲೇಜಿನ ಪ್ರಾಂಶುಪಾಲರು ನೀಡಿರುವ ದೂರಿನಂತೆ  ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ  ಅ.ಕ್ರ: 39/2022 ಕಲಂ: 505(2)  ಐ.ಪಿ,ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ

 

 

ಅಸ್ವಾಭಾವಿಕ ಮರಣ ಪ್ರಕರಣ: 1

 • ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ : ಪಿರ್ಯಾಧಿದಾರರಾದ ರೋಶನ್.ಕೆ.ಎಸ್, ಪ್ರಾಯ: 33 ವರ್ಷ, ತಂದೆ: ಶೀನಪ್ಪ ಗೌಡ.ಪಿ, ವಾಸ: ವಿದ್ಯಾರಣ್ಯ ಮನೆ, ಒಳಮೊಗ್ರು ಗ್ರಾಮ, ಪುತ್ತೂರು ಎಂಬವರ ದೂರಿನಂತೆ ಫಿರ್ಯಾದಿರವರ ತಂದೆ ಶೀನಪ್ಪ ಗೌಡರವರು ಸುಮಾರು 12 ವರ್ಷಗಳ ಹಿಂದೆ ಪಾರ್ಶವಾಯುಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದರೂ ಮನೆಯಲ್ಲಿ ಸರಿಯಾಗಿ ಓಡಾಡಲು ಸಾಧ್ಯವಾಗದೇ ಇದ್ದು, ದಿನಾಂಕ 08.06.2022 ರಂದು ಶೀನಪ್ಪ ಗೌಡರವರು ಎಂದಿನಂತೆ ರಾತ್ರಿ ಊಟ ಮಾಡಿ ಸುಮಾರು 10.00 ಗಂಟೆಗೆ ಮಲಗಲು ಅವರ ಕೋಣೆಗೆ ತೆರಳಿದವರು ಈ ದಿನ ದಿನಾಂಕ 09.06.2022 ರಂದು ಬೆಳಿಗ್ಗೆ 06.30 ಗಂಟೆಗೆ ಫಿರ್ಯಾದಿದಾರರ ತಾಯಿ ಶೀನಪ್ಪ ಗೌಡರವರನ್ನು ಎಬ್ಬಿಸಲು ಸದ್ರಿಯವರ ಕೋಣೆಗೆ ಹೋದಾಗ ಬಾಗಿಲು ಹಾಕಿದ್ದು ಬಾಗಿಲನ್ನು ದೂಡಿ ನೋಡಿದಾಗ ಶೀನಪ್ಪ ಗೌಡರವರು ಸದ್ರಿ ಕೋಣೆಯಲ್ಲಿದ್ದ ಫ್ಯಾನಿಗೆ ಬಟ್ಟೆಯನ್ನು ಕಟ್ಟಿ ಅದರ ಇನ್ನೊಂದು ತುದಿಯನ್ನು ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು.ಈ ಬಗ್ಗೆ  ಠಾಣಾ ಯು.ಡಿ.ಆರ್: 20/2022  ಕಲo: 174 ಸಿಆರ್.ಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 10-06-2022 10:46 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080