ಅಭಿಪ್ರಾಯ / ಸಲಹೆಗಳು

ಇತರೆ ಪ್ರಕರಣ: 1

 

ಸುಳ್ಯ ಪೊಲೀಸ್ ಠಾಣೆ : ಗಿರಿಯಪ್ಪಗೌಡ ಸಹಾಯಕ ಪೊಲೀಸ್‌ ಉಪ ನಿರೀಕ್ಷಕರವರು ದಿನಾಂಕ:09.08.2022ರಂದು ಜಾಲ್ಸೂರಿನಲ್ಲಿ ಕರ್ತವ್ಯದಲ್ಲಿರುವ ಸಮಯ  ಕನಕಮಜಲು ಸುಣ್ಣಮೂಲೆ ಎಂಬಲ್ಲಿನ ನಿವಾಸಿ ಸಂದೀಪ(33) ಎಂಬಾತನು ನಿರ್ಲಕ್ಷ್ಯತನದಿಂದ ಹರಿತವಾದ ಮಾರಕ ಅಸ್ತ್ರವಾದ ಕತ್ತಿಯನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಜನರಲ್ಲಿ ಭಯ ಬೀತಿಯನ್ನು ಉಂಟು ಮಾಡುವಂತೆ ಸಾರ್ವಜನಿಕ ರಸ್ತೆಯಲ್ಲಿ ಪ್ರದರ್ಶನ ಮಾಡುತ್ತಿದ್ದು ಸ್ಥಳದಲ್ಲಿ ಭಯದ ವಾತಾವರಣ ಸೃಷ್ಠಿ ಮಾಡುತ್ತಿರುವ ಬಗ್ಗೆ ಬಂದ ಮಾಹಿತಿ ಆದಾರದ ಮೇಲೆ ಸ್ಥಳಕ್ಕೆ ತಲುಪಿದಾಗ ಸಂದೀಪನು ತನ್ನ ಕೈಯಲ್ಲಿ ಹರಿತವಾದ ಮಾರಕ ಆಯುಧವಾದ ಉದ್ದನೆಯ ಕತ್ತಿಯನ್ನು ಹಿಡಿದುಕೊಂಡು ನಿರ್ಲಕ್ಷ್ಯತನದಿಂದ ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವುದನ್ನು ಕಂಡುಬಂದಿದ್ದು. ಈ ಬಗ್ಗೆ ಸುಳ್ಯ ಪೊಲೀಸ್ ಠಾಣಾ ಅ,ಕ್ರ 90/22  ಕಲಂ 336 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಅಸ್ವಾಭಾವಿಕ ಮರಣ ಪ್ರಕರಣ: 1

 

ಸುಳ್ಯ ಪೊಲೀಸ್ ಠಾಣೆ : ಪಿರ್ಯಾಧಿದಾರರಾದ ಯತೀಶ ಎಂ (39) ತಂದೆ: ಕುಂಞಣ್ಣ ಭಂಡಾರಿ ವಾಸ: ಮಂಡೆಕೋಲು ಶಾಲೆಬಳಿ ಹತ್ತಿರ ಮನೆ. ಸುಳ್ಯ ತಾಲೂಕು ಎಂಬವರ ದೂರಿನಂತೆ ಪಿರ್ಯಾದುದಾರರ ದೊಡ್ಡಪ್ಪನ ಮಗ ಜಯಂತ (42) ಎಂಬಾತನು ಸುಮಾರು 20 ವರ್ಷಗಳಿಂದ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಸಹ ಪಡೆಯುತ್ತಿದವನು, ದಿನಾಂಕ 10.08.2022 ರಂದು ಸಮಯ ಸುಮಾರು 19:45 ಗಂಟೆಗೆ ಪಿರ್ಯಾದುದಾರರ ಮನೆಯಾದ ಸುಳ್ಯ ತಾಲೂಕು ಮಂಡೆಕೋಲು ಎಂಬಲ್ಲಿ ಪಿರ್ಯಾದುದಾರರ ಮಗನನ್ನು ಎತ್ತಿಕೊಂಡು ಆಟವಾಡುತ್ತಿದ್ದಾಗ ಜಯಂತನು ಕುಸಿದು ಬಿದ್ದಿದ್ದು, ಪಿರ್ಯಾದುದಾರರು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಲ್ಲಿ ಜಯಂತನನ್ನು ಪರೀಕ್ಷಿಸಿ ಮೃತ ಪಟ್ಟಿರುವುದಾಗಿ ವೈದ್ಯರು ತಿಳಿಸಿರುತ್ತಾರೆ. ಈ ಬಗ್ಗೆ ಸುಳ್ಯ ಪೊಲೀಸ್ ಠಾಣಾ ಯುಡಿಆರ್ ನಂ: 35/2022 ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 11-08-2022 11:29 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080