ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: 1

  • ಬಂಟ್ವಾಳ ಸಂಚಾರ ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ರಫೀಕ್ (55) ವರ್ಷ.ತಂದೆ: ಹಸನಬ್ಬ.ವಾಸ: ಪುಳಿಂಪಾಡಿ ಮನೆ, ಬಾರ್ಯಾ ಗ್ರಾಮ,ಬೆಳ್ತಂಗಡಿ ಎಂಬವರ ದೂರಿನಂತೆ ಪಿರ್ಯಾದಿದಾರರ ಮಗ ಮುಹಮ್ಮದ್ ರಾಹಿಲ್ ಎಂಬವರು ದಿನಾಂಕ 10-10-2022 ರಂದು ಸಮಯ ಸುಮಾರು ಸಂಜೆ 5:45 ಗಂಟೆಗೆ ಬಂಟ್ವಾಳ ತಾಲೂಕು ಗೋಳ್ತಮಜಲು ಗ್ರಾಮದ ಮಾಣಿಮಜಲು ಎಂಬಲ್ಲಿ ಮನೆಯ ಇನ್ನೊಂದು ಬದಿಯಲ್ಲಿರುವ ಅಂಗಡಿಗೆ ಹೋಗಿ ವಾಪಸು ಮನೆ ಕಡೆಗೆ ರಸ್ತೆ ದಾಟುತ್ತಿದ್ದ ವೇಳೆಗೆ ಕಲ್ಲಡ್ಕ ಕಡೆಯಿಂದ KA-70-3641 ಆಟೋರಿಕ್ಷಾ ಚಾಲಕ ನಾಗೇಶ್ ರವರು ದೂರದಿಂದ ನೋಡಿದರು ನಿದಾನಿಸದೆ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ರಸ್ತೆ ದಾಟುತ್ತಿದ್ದ ಮಗುವಿಗೆ ಡಿಕ್ಕಿ ಹೊಡೆದು ಅಪಘಾತಪಡಿಸಿದ ಪರಿಣಾಮ ತಲೆಗೆ ಗುದ್ದಿದ ನೋವು, ಮುಖಕ್ಕೆ ಗುದ್ದಿದ ಹಾಗೂ ರಕ್ತ ಗಾಯ, ಬಲಗೈಗೆ ಗುದ್ದಿದ ಹಾಗೂ ತರಚಿದ ಗಾಯವಾಗಿದ್ದು ಚಕಿತ್ಸೆಯ ಬಗ್ಗೆ ಮಂಗಳೂರು ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆ ಅ.ಕ್ರ 117/2022 ಕಲಂ: 279, 337 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

 

ಇತರೆ ಪ್ರಕರಣ: 2

  • ಪುತ್ತೂರು ನಗರ ಪೊಲೀಸ್ ಠಾಣೆ : ಪುತ್ತೂರು ನಗರ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಶ್ರೀಕಾಂತ್‌ ರಾಠೋಡ್‌ ರವರು ದಿನಾಂಕ: 12.10.2022 ರಂದು ಸಿಬ್ಬಂದಿಗಳೊಂದಿಗೆ ಠಾಣಾ ವ್ಯಾಪ್ತಿಯಲ್ಲಿ  ರೌಂಡ್ಸ್ ಕರ್ತವ್ಯದಲ್ಲಿರುವ ಸಮಯ   ಪುತ್ತೂರು ತಾಲೂಕು ಕಬಕ ಗ್ರಾಮದ ಪೋಳ್ಯ ಎಂಬಲ್ಲಿ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಒಬ್ಬ ವ್ಯಕ್ತಿ ಅನುಚಿತವಾಗಿ ವರ್ತಿಸುತ್ತ ಸಾರ್ವಜನಿಕರನ್ನು ಉದ್ದೇಶಿಸಿ ಹೀನಾಯವಾಗಿ ಮಾತನಾಡುತ್ತಾ ತೊಂದರೆ ನೀಡುತ್ತಿರುವುದಾಗಿ ಬಂದ ಮಾಹಿತಿ ಪ್ರಕಾರ ಸಮಯ ಬೆಳಿಗ್ಗೆ ಸುಮಾರು 09.30 ಗಂಟೆಗೆ ಕಬಕ ಗ್ರಾಮದ ಪೋಳ್ಯ ಎಂಬಲ್ಲಿರುವ  ಸಾರ್ವಜನಿಕ ಬಸ್ ನಿಲ್ದಾಣದ ಬಳಿ ತೆರಳಿ ನೋಡಿದಾಗ ಒಬ್ಬ ವ್ಯಕ್ತಿ ಅನುಚಿತವಾಗಿ ವರ್ತಿಸುತ್ತಾ ಸಾರ್ವಜನಿಕರಿಗೆ ಮುಜುಗರ ಉಂಟು ಮಾಡುವ ರೀತಿಯಲ್ಲಿ ವರ್ತಿಸುತ್ತಿರುವುದು ಕಂಡು ಬಂದಿದ್ದು, ಪೊಲೀಸ್ ಉಪನಿರೀಕ್ಷಕರು ಸಿಬ್ಬಂದಿಗಳೊಂದಿಗೆ  ಇಲಾಖಾ ಜೀಪಿನಿಂದ ಇಳಿದು ಸದ್ರಿ ವ್ಯಕ್ತಿಯ ಬಳಿ ತೆರಳಿ ಆತನನ್ನು ವಿಚಾರಿಸಲಾಗಿ ಆತನು  ಮಾದಕ ದ್ರವ್ಯ ಗಾಂಜಾ ಸೇವನೆ ಮಾಡಿದ ಬಗ್ಗೆ ಸಂಶಯ ಇರುವುದು ಕಂಡು ಬಂದಿರುದರಿಂದ ಅವನ ಹೆಸರು ವಿಳಾಸ ಪಡೆಯಲಾಗಿ ಉಮ್ಮರ್ ಫಾರೂಖ್ ಪ್ರಾಯ: 36 ವರ್ಷ ತಂದೆ: ದಿ/ಮೊಯಿದು ಕುಂಞಿ ವಾಸ: ಕಲ್ಲಂದಡ್ಕ ಮನೆ ಕಬಕ ಅಂಚೆ ಮತ್ತು ಗ್ರಾಮ ಪುತ್ತೂರು ತಾಲೂಕು   ಎಂಬುದಾಗಿ ತಿಳಿಸಿರುತ್ತಾನೆ.  ನಂತರ ಸಿಬ್ಬಂದಿಗಳ ಜೊತೆ ಅವನನ್ನು ವಶಕ್ಕೆ ಪಡೆದುಕೊಂಡು ಠಾಣೆಗೆ ಕರೆದುಕೊಂಡು ಬಂದು ಆಬಳಿಕ ವೈದ್ಯಾಧಿಕಾರಿಯವರ ಮುಂದೆ ಹಾಜರುಪಡಿಸಿದಲ್ಲಿ ಅಲ್ಲಿನ ವೈದ್ಯಾಧಿಕಾರಿಗಳು ಪರೀಕ್ಷಿಸಿ ಆತನು ಗಾಂಜ ಸೇವನೆ ಮಾಡಿರುವ ಬಗ್ಗೆ ದೃಢಪಡಿಸಿರುತ್ತಾರೆ. ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣಾ   ಅ.ಕ್ರ: 84/2022 ಕಲಂ: 27 (ಬಿ) ಎನ್.ಡಿ.ಪಿ.ಎಸ್‌ ಕಾಯ್ದೆ 1985ಯಂತೆ ಪ್ರಕರಣ ದಾಖಲಾಗಿರುತ್ತದೆ.

 

  • ಸುಳ್ಯ ಪೊಲೀಸ್ ಠಾಣೆ : ಪಿರ್ಯಾಧಿದಾರರಾದ ಶರತ್ ಕುಮಾರ್ ಎನ್ ಪ್ರಾಯ 28 ವರ್ಷ ತಂದೆ: ಕರುಣಾಕರ ಗೌಡ ವಾಸ: ನಾಂಗೋಳಿ ಮನೆ, ಪಡ್ಡಂಬೈಲ್ ಅಜ್ಜಾವರ ಗ್ರಾಮ ಸುಳ್ಯ ಎಂಬವರ ದೂರಿನಂತೆ ಪಿರ್ಯಾದಿರವರು ಕಳೆದ 3 ತಿಂಗಳಿನಿಂದ ಸುಳ್ಯ ಕೆವಿಜಿ ಸಂಸ್ಥೆಯ ಕಟ್ಟಡಗಳಲ್ಲಿ ಸುಳ್ಯ ಕುರುಂಜಿಗುಡ್ಡೆಯ ನಿವಾಸಿ ಗುತ್ತಿಗೆದಾರರಾದ ವಿಜಯ್‌ಕುಮಾರ್‌ರವರ ಗುತ್ತಿಗೆ ಅಡಿಯಲ್ಲಿ ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದು, ಪಿರ್ಯಾದಿದಾರರ ಅಧೀನದಲ್ಲಿ ಒಟ್ಟು 10 ಜನ ಕೆಲಸ ಮಾಡಿಕೊಂಡಿದ್ದು, ದಿನಾಂಕ 12.10.2022 ರಂದು ಎಂದಿನಂತೆ ಕೆವಿಜಿ ಮೆಡಿಕಲ್ ಕಾಲೇಜು ಕಟ್ಟಡದ ಹೊರಭಾಗದಲ್ಲಿ ಪಿರ್ಯಾದಿದಾರರು ಸೇರಿದಂತೆ ಬಿಹಾರ ಮೂಲದ 3 ಜನ  ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದು, ಆ ಪೈಕಿ ರಂಜಿತ್ ಚೌಧರಿ (32 ವರ್ಷ) ಎಂಬಾತನು ಮೂರನೆ ಅಂತಸ್ತಿನ ಬಳಿ ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದ ಸಮಯ ಸುಮಾರು ಮಧ್ಯಾಹ್ನ 12.40 ಗಂಟೆಗೆ ಪಿರ್ಯಾದಿದಾರರು ಕೆಳಗಡೆ ಬೇರೆ ಕೆಲಸದಲ್ಲಿ ಇದ್ದ ಸಮಯ ನೋಡುತ್ತಿದ್ದಂತೆ ರಂಜಿತ್ ಚೌಧರಿ ಮೇಲಿಂದ ಕೆಳಗೆ ಬಿದ್ದವನನ್ನು ಕೂಡಲೇ ಪಿರ್ಯಾದಿದಾರರು ಹಾಗೂ ಇತರರು ಸೇರಿ ಉಪಚರಿಸಿ ಚಿಕಿತ್ಸೆ ಬಗ್ಗೆ ಕೆವಿಜಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿನ ವೈದ್ಯರು ಚಿಕಿತ್ಸೆ ನೀಡಿದರೂ ರಂಜಿತ್ ಚೌಧರಿಯು ಚಿಕಿತ್ಸೆಗೆ ಸ್ಪಂದಿಸದೇ ಮಧ್ಯಾಹ್ನ 14.38 ಗಂಟೆಗೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದು. ಈ ಬಗ್ಗೆ ಸುಳ್ಯ ಪೊಲೀಸು ಠಾಣಾ ಅ.ಕ್ರ 120/2022 ಕಲಂ 304(ಎ) ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 13-10-2022 10:53 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080