ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: 1

  • ಪುತ್ತೂರು ಸಂಚಾರ ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ಶೀಲಾವತಿ, ಪ್ರಾಯ 34 ವರ್ಷ, ಗಂಡ: ರವಿ ಹೆಚ್‌,  ವಾಸ: ಕುಂದ್ರುಕೋಟೆ ಮನೆ,  ನೆಹರೂನಗರ ಅಂಚೆ, ಕಬಕ ಗ್ರಾಮ, ಪುತ್ತೂರು ಎಂಬವರ ದೂರಿನಂತೆ ದಿನಾಂಕ 14-01-2023 ರಂದು 15:50 ಗಂಟೆಗೆ ಆರೋಪಿ ಲಾರಿ ಚಾಲಕ ರವಿ  ಎಂಬವರು KA-41-A-8649 ನೇ ನೋಂದಣಿ ನಂಬ್ರದ ಲಾರಿಯನ್ನು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರು ಕಡೆಯಿಂದ ಮೈಸೂರು ಕಡೆಗೆ ಚಲಾಯಿಸಿಕೊಂಡು ಹೋಗಿ, ಪುತ್ತೂರು ತಾಲೂಕು ಪುತ್ತೂರು ಕಸಬಾ ಗ್ರಾಮದ ಲಿನೆಟ್‌ ಜಂಕ್ಷನ್‌ ಬಳಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಹೆದ್ದಾರಿಯ ತೀರಾ ಎಡಬದಿಗೆ ಚಲಾಯಿಸಿದ ಪರಿಣಾಮ, ಪಿರ್ಯಾದುದಾರರಾದ ಶೀಲಾವತಿ  ರವರು ಪುತ್ತೂರು ಕಡೆಯಿಂದ ಮಂಜಲ್ಪಡ್ಪು ಕಡೆಗೆ ಚಲಾಯಿಸಿಕೊಂಡು ಹೋಗಿ, ಹೆದ್ದಾರಿಯನ್ನು ದಾಟಲು ಹೆದ್ದಾರಿಯ ಎಡಬದಿಯಲ್ಲಿ ನಿಲ್ಲಿಸಿದ್ದ KA-21-R-3488 ನೇ  ನೊಂದಣಿ ನಂಬ್ರದ ಸ್ಕೂಟರಿಗೆ ಲಾರಿ ಅಪಘಾತವಾಗಿ ಪಿರ್ಯಾದುದಾರರು ಸ್ಕೂಟರ್‌ ಸಮೇತ ರಸ್ತೆಗೆ ಬಿದ್ದು, ಪಿರ್ಯಾದುದಾರರ ಎಡಕಾಲಿನ ಪಾದಕ್ಕೆ, ಎಡಕಾಲಿನ ಮೊಣಗಂಟಿಗೆ ಗುದ್ದಿದ ಹಾಗೂ ರಕ್ತಗಾಯವಾಗಿ  ಚಿಕಿತ್ಸೆ ಬಗ್ಗೆ ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.ಈ ಬಗ್ಗೆ ಪುತ್ತೂರು ಸಂಚಾರ ಠಾಣೆ 07/2023 ಕಲಂ: 279, 337  ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 16-01-2023 10:44 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080