ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: ೦1

 

ಬಂಟ್ವಾಳ ಸಂಚಾರ ಪೊಲೀಸ್ ಠಾಣೆ:  ಪಿರ್ಯಾದಿದಾರರಾದ  ಯಶೋಧ,  ಪ್ರಾಯ: 39 ವರ್ಷ ಗಂಡ: ವಸಂತ ಪೂಜಾರಿ ,ವಾಸ: ಕುರ್ಪುದಕೋಡಿ ಮನೆ, ಬಾಳ್ತಿಲ ಗ್ರಾಮ, ಬಂಟ್ವಾಳ ತಾಲೂಕು ಪಾಣೆಮಂಗಳೂರು ಗ್ರಾಮ ಎಂಬವರು ಕರಣಿಕರ ಕಛೇರಿಯಲ್ಲಿ ಕೆಲಸ ಮಾಡಿಕೊಂಡಿದ್ದು ದಿನಾಂಕ 12-8-2021 ರಂದು ಕೆಲಸದ ನಿಮಿತ್ತ ತನ್ನ ಬಾಬ್ತು KA-19-HE-1686 ನೇ ಸ್ಕೂಟರನ್ನು ಸವಾರಿ ಮಾಡಿಕೊಂಡು ಹೋಗುತ್ತಾ ಸಮಯ ಸುಮಾರು ಬೆಳಿಗ್ಗೆ 10:30 ಗಂಟೆಗೆ ಬಂಟ್ವಾಳ ತಾಲೂಕು ಪಾಣೆಮಂಗಳೂರು ಗ್ರಾಮದ ಪಾಣೆಮಂಗಳೂರು ಪೇಟೆ ತಲುಪಿದಾಗ ಆಲಡ್ಕ ಕಡೆಯಿಂದ KA19-AB-0285ನೇ ಆಟೋರಿಕ್ಷಾವನ್ನು ಅದರ ಚಾಲಕ ದಿನೇಶರವರು ಅತೀ ವೇಗ ಅಜಾಗರೂಕತೆ ಹಾಗೂ  ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಪಿರ್ಯಾದಿಯ ಸ್ಕೂಟರಿಗೆ ಡಿಕ್ಕಿ ಹೊಡೆದು ಅಪಘಾತಪಡಿಸಿದ ಪರಿಣಾಮ ಪಿರ್ಯಾದಿದಾರರ ಬಲ ಕಾಲಿನ ಮಣಿಗಂಟಿಗೆ ಗುದ್ದಿದ ಗಾಯವಾಗಿದ್ದು ಚಿಕಿತ್ಸೆಯ ಬಗ್ಗೆ ಸೋಮಯಾಜಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುವುದಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣಾ  ಅ.ಕ್ರ. 77/2021  ಕಲಂ 279, 338 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಅಸ್ವಾಭಾವಿಕ ಮರಣ ಪ್ರಕರಣ: 1

 

ಸುಳ್ಯ ಪೊಲೀಸ್ ಠಾಣೆ : ಪಿರ್ಯಾದಿದಾರರಾದ ಜಯಪ್ರಕಾಶ (27) ತಂದೆ: ಚಂದ್ರಶೇಖರ ವಾಸ: ಏಣಾವರ ಮನೆ, ಕೆಮ್ಮಾರು, ಆಲೆಟ್ಟಿ ಗ್ರಾಮ,ಸುಳ್ಯ ತಾಲೂಕು ಎಂಬವರ ದೂರಿನಂತೆ ಅವರ ತಂದೆ ಚಂದ್ರಶೇಖರ (60)  ಎಂಬಾತನು ವಿಪರೀತ ಮದ್ಯ ಸೇವನೆ ಮಾಡುವ ಚಟವನ್ನು ಹೊಂದಿದ್ದು, ದಿನಾಂಕ 11.08.2021 ರಂದು ಸಂಜೆ 19:00 ಗಂಟೆಗೆ ತಮ್ಮ ಮನೆಯಾದ ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದ ಏಣಾವರದಿಂದ ಕಾಣೆಯಾದವರನ್ನು  ಹುಡುಕಾಡಿದಲ್ಲಿ ಪತ್ತೆಯಾಗದೇ ಇದ್ದು, ದಿನಾಂಕ 14.08.2021 ರಂದು ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದ ಏಣಾವರದಲ್ಲಿ ಚಂದ್ರಶೇಖರವರೂ ಉಪಯೋಗಿಸುತ್ತಿದ್ದ ಚೀಲಾ ಹಾಗೂ ಕೊಡೆಯನ್ನು ಪಿರ್ಯಾದುದಾರರ ತಾಯಿ ಕಂಡು ಸಂಶಯಗೊಂಡು  ಸುತ್ತ-ಮುತ್ತಲು ಹುಡಕಾಡಿದಲ್ಲಿ ಏಣಾವರ ಹೊಳೆಯ ಬದಿಯಲ್ಲಿ ಹರಿಯುವ ನೀರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಚಂದ್ರಶೇಖರರವರ ಮೃತ ದೇಹ ಸಿಕ್ಕಿರುವುದಾಗಿದೆ. ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆ. UDR No 34/2021 Sec: 174 (CRPC)  ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 15-08-2021 12:54 PM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080