ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: 3

  • ಬಂಟ್ವಾಳ ಸಂಚಾರ ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ಅಬ್ದುಲ್ ಕರೀಂ, ಪ್ರಾಯ:50 ತಂದೆ: ದಿ|| ಪಿ.ಮಹಮ್ಮದ್ ವಾಸ;ಬೊಟ್ಟು ಮನೆ, ಮಲ್ಲೂರು ಅಂಚೆ ಮತ್ತು ಗ್ರಾಮ ಮಂಗಳೂರು ಎಂಬವರ ದೂರಿನಂತೆ ದಿನಾಂಕ 14-01-2023 ರಂದು ಫಿರ್ಯಾದಿದಾರರು ಅವರ ಬಾಬ್ತು KA 19 EX 5479 ನೇ ಮೋಟಾರ್ ಸೈಕಲ್ ನಲ್ಲಿ ಪಾಣೆಮಂಗಳೂರಿನಲ್ಲಿ ಅವರು ಕೆಲಸ ಮಾಡುವ ಅಂಗಡಿಯಿಂದ ಪಾಣೆಮಂಗಳೂರು ಪೇಟೆ ಕಡೆಗೆ ಹೋಗುತ್ತಾ ಸಮಯ ಸುಮಾರು ಮಧ್ಯಾಹ್ನ 12:30 ಗಂಟೆಗೆ ಬಂಟ್ವಾಳ ತಾಲೂಕು ಪಾಣೆಮಂಗಳೂರು ಗ್ರಾಮದ ಪಾಣೆಮಂಗಳೂರು ಎಂಬಲ್ಲಿಗೆ ತಲುಪುತ್ತಿದ್ದಂತೆ  ಫಿರ್ಯಾದಿದಾರರ ಹಿಂದಿನಿಂದ ಮೋಟಾರ್ ಸೈಕಲೊಂದನ್ನು ಅದರ ಸವಾರ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಹೋಗಿ ಫಿರ್ಯಾದಿದಾರರು ಸವಾರಿ ಮಾಡುತ್ತಿದ್ದ ಮೋಟಾರ್ ಸೈಕಲ್ ಹಿಂಬದಿಗೆ ಡಿಕ್ಕಿ ಹೊಡೆದು ಅಪಘಾತವಾಗಿದ್ದು ಪರಿಣಾಮ ಫಿರ್ಯಾದಿದಾರರು ಮೋಟಾರ್ ಸೈಕಲ್ ಸಮೇತ ಎಸೆಯಲ್ಪಟ್ಟು ರಸ್ತೆಗೆ ಬಿದ್ದು ಬಲ ಮೊಣ ಮತ್ತು ಕೋಲು ಕಾಲಿಗೆ ಗುದ್ದಿದ ಮತ್ತು ರಕ್ತಗಾಯವಾಗಿದ್ದು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ  ಪ್ರಥಮ ಚಿಕಿತ್ಸೆ  ಪಡೆದು ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರಿನ ಅಥೆನಾ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುವುದಾಗಿದೆ.ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ಅ.ಕ್ರ 05/2023 ಕಲಂ 279,337 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

  • ಬಂಟ್ವಾಳ ಸಂಚಾರ ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ನೂರುಲ್ ಮುಬಿನ್, ಪ್ರಾಯ:40 ತಂದೆ: ದಿ|| ಅಬೂಬಕ್ಕರ ವಾಸ;1-145 ಕೆ.ಸಿ.ರೋಡು ಮನೆ, ಗೋಳ್ತಮಜಲು ಗ್ರಾಮ ಬಂಟ್ವಾಳ ಎಂಬವರ ದೂರಿನಂತೆ ದಿನಾಂಕ 14-01-2023 ರಂದು ಫಿರ್ಯಾದಿದಾರರು ಸಹಸವಾರನಾಗಿ ನಿಜಾಮುದ್ದಿನ್ ಸವಾರನಾಗಿ  KA 19 EJ 6698 ನೇ ಸ್ಕೂಟರ್ ನಲ್ಲಿ  ಕರಿಂಗಾಣ ಕಡೆಯಿಂದ ಮನೆ ಕಡೆಗೆ ಬರುತ್ತಾ ಸಮಯ ಸುಮಾರು 13:00 ಗಂಟೆಗೆ ಬಂಟ್ವಾಳ ತಾಲೂಕು ಅಮ್ಟೂರು ಗ್ರಾಮದ ಕಟ್ಟೆಮಾರು ಎಂಬಲ್ಲಿಗೆ ತಲುಪುತ್ತಿದ್ದಂತೆ ಸ್ಕೂಟರ್ ಸವಾರ ಸ್ಕೂಟರ್ ನ್ನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ ಸ್ಕೂಟರ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಸ್ಕೂಟರ್ ಸಮೇತ  ರಸ್ತೆಗೆ ಬಿದ್ದ ಪರಿಣಾಮ ಫಿರ್ಯಾದಿದಾರರ  ಬಲಕಾಲಿಗೆ ಗುದ್ದಿದ ನೋವಾಗಿದ್ದು  ಕಲ್ಲಡ್ಕ ಪುಷ್ಪರಾಜ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರಿನ ಕೋಡಿಯಾಲ್ ಬೈಲು ಯೆನಪೋಯ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುವುದಾಗಿದೆ.ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ಅ.ಕ್ರ 06/2023 ಕಲಂ 279,337 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

  • ಪುತ್ತೂರು ಸಂಚಾರ ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ಶೀಲಾವತಿ, ಪ್ರಾಯ 34 ವರ್ಷ, ಗಂಡ: ರವಿ ಹೆಚ್‌,  ವಾಸ: ಕುಂದ್ರುಕೋಟೆ ಮನೆ,  ನೆಹರೂನಗರ ಅಂಚೆ, ಕಬಕ ಗ್ರಾಮ, ಪುತ್ತೂರು ತಾಲೂಕು ಎಂಬವರ ದೂರಿನಂತೆ ದಿನಾಂಕ 14-01-2023 ರಂದು 15:50 ಗಂಟೆಗೆ ಆರೋಪಿ ಲಾರಿ ಚಾಲಕ ರವಿ  ಎಂಬವರು KA-41-A-8649 ನೇ ನೋಂದಣಿ ನಂಬ್ರದ ಲಾರಿಯನ್ನು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರು ಕಡೆಯಿಂದ ಮೈಸೂರು ಕಡೆಗೆ ಚಲಾಯಿಸಿಕೊಂಡು ಹೋಗಿ, ಪುತ್ತೂರು ತಾಲೂಕು ಪುತ್ತೂರು ಕಸಬಾ ಗ್ರಾಮದ ಲಿನೆಟ್‌ ಜಂಕ್ಷನ್‌ ಬಳಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಹೆದ್ದಾರಿಯ ತೀರಾ ಎಡಬದಿಗೆ ಚಲಾಯಿಸಿದ ಪರಿಣಾಮ, ಪಿರ್ಯಾದುದಾರರಾದ ಶೀಲಾವತಿ  ರವರು ಪುತ್ತೂರು ಕಡೆಯಿಂದ ಮಂಜಲ್ಪಡ್ಪು ಕಡೆಗೆ ಚಲಾಯಿಸಿಕೊಂಡು ಹೋಗಿ, ಹೆದ್ದಾರಿಯನ್ನು ದಾಟಲು ಹೆದ್ದಾರಿಯ ಎಡಬದಿಯಲ್ಲಿ ನಿಲ್ಲಿಸಿದ್ದ KA-21-R-3488 ನೇ  ನೊಂದಣಿ ನಂಬ್ರದ ಸ್ಕೂಟರಿಗೆ ಲಾರಿ ಅಪಘಾತವಾಗಿ ಪಿರ್ಯಾದುದಾರರು ಸ್ಕೂಟರ್‌ ಸಮೇತ ರಸ್ತೆಗೆ ಬಿದ್ದು, ಪಿರ್ಯಾದುದಾರರ ಎಡಕಾಲಿನ ಪಾದಕ್ಕೆ, ಎಡಕಾಲಿನ ಮೊಣಗಂಟಿಗೆ ಗುದ್ದಿದ ಹಾಗೂ ರಕ್ತಗಾಯವಾಗಿ  ಚಿಕಿತ್ಸೆ ಬಗ್ಗೆ ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.ಈ ಬಗ್ಗೆ ಪುತ್ತೂರು ಸಂಚಾರ ಠಾಣೆ 07/2023 ಕಲಂ: 279, 337  ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 16-01-2023 12:03 PM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080