ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: 2

  • ವಿಟ್ಲ ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ಪ್ರಭಾಕರ ಡಿ ಪ್ರಾಯ 50 ವರ್ಷ ತಂದೆ:ದಿ||ಅಪ್ಪು ಬೆಳ್ಚಪ್ಪಾಡ ವಾಸ:ಕಲ್ಲಂಬಳ ಮನೆ, ತೋಡಿಕಾನ ಗ್ರಾಮ ಸುಳ್ಯ ಎಂಬವರ ದೂರಿನಂತೆ ಪಿರ್ಯಾಧಿದಾರರು ನಿನ್ನೆ ದಿನಾಂಕ:25-10-2022 ರಂದು ತನ್ನ ಹೆಂಡತಿಯ ಮನೆಯಾದ ಮೈರಾದಿಂದ ದೀಪಾವಳಿ ಹಬ್ಬದ ನಿಮಿತ್ತ ಪಟಾಕಿ ತರಲೆಂದು ವಿಟ್ಲ-ಮಂಜೇಶ್ವರ ಸಾರ್ವಜನಿಕ ಡಾಮಾರು ರಸ್ತೆಯ ಎಡ ಬದಿಯಲ್ಲಿ ವಿಟ್ಲ ಕಡೆಗೆ ನಡೆದುಕೊಂಡು ಬರುತ್ತಿರುವಾಗ ಸಮಯ ಸುಮಾರು ರಾತ್ರಿ 7.30 ಗಂಟೆಗೆ ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮದ ಕಾಶಿಮಠ ಎಂಬಲ್ಲಿಗೆ ತಲುಪಿದಾಗ ವಿಟ್ಲ ಕಡೆಯಿಂದ ಮಂಜೇಶ್ವರ ಕಡೆಗೆ ಅಪರಿಚಿತ ಲಾರಿಯೊಂದನ್ನು ಅದರ ಚಾಲಕ ಅಜಾಗರೂಕತೆ ಹಾಗೂ ನಿರ್ಕ್ಷತನದಿಂದ  ರಸ್ತೆಯ ತೀರಾ ಬಲಬದಿಗೆ ಚಲಾಯಿಸಿಕೊಂಡು ಬಂದು ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಿರ್ಯಾಧಿದಾರರಿಗೆ ಡಿಕ್ಕಿಯನ್ನುಂಟು ಮಾಡಿ ಲಾರಿಯನ್ನು ನಿಲ್ಲಿಸದೆ ಗಾಯಾಳುವನ್ನು ಉಪಚರಿಸಿದೆ ,ಅಪಘಾತದ ಬಗ್ಗೆ ಪೊಲೀಸ್‌ರಿಗೆ ಮಾಹಿತಿ ನೀಡದೆ ಅಪಘಾತ ಸ್ಥಳದಿಂದ ಲಾರಿಯ ಚಾಲಕ ಲಾರಿಯೊಂದಿಗೆ ಪರಾರಿಯಾಗಿರುತ್ತಾನೆ. ಈ ಅಪಘಾತದಿಂದ ಪಿರ್ಯಾಧಿದಾರರ ಬಲ ಕೋಲು ಕಾಲಿಗೆ ರಕ್ತಗಾಯವಾಗಿರುತ್ತದೆ. ಕೂಡಲೇ ಗಾಯಾಳುವನ್ನು ಅಂಬುಲೆನ್ಸ ಒಂದರಲ್ಲಿ  ಚಿಕಿತ್ಸೆಯ ಬಗ್ಗೆ ಮಂಗಳೂರು ವೆನ್ಲಾಕ್‌ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು ಅಲ್ಲಿನ ವೈದ್ಯರು ಪರೀಕ್ಷಿಸಿ ಐಸಿಯುನಲ್ಲಿ ಯಲ್ಲಿ ಒಳರೊಗಿಯಾಗಿ ದಾಖಲಿಸಿರುತ್ತಾರೆ.ಈ ಬಗ್ಗೆ ವಿಟ್ಲ ಪೊಲೀಸ್‌ ಠಾಣಾ ಅ.ಕ್ರ 164/2022  ಕಲಂ: 279,337 ಬಾಧಂಸಂ ಮತ್ತು ಕಲಂ:134 (ಎ&ಬಿ) ಐಎಂವಿ ಕಾಯ್ದೆ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

  • ಬೆಳ್ತಂಗಡಿ ಸಂಚಾರ  ಪೊಲೀಸ್ ಠಾಣೆ: ಪಿರ್ಯಾಧಿದಾರರಾದ ಶರವಣ್‌ (25), ತಂದೆ: ಮೋಹನ್‌ ಆರ್‌,ವಾಸ: ನಂ:49, 8ನೇ ಮೈನ್‌, 2ನೇ ಸ್ಟೇಜ್‌ ಮಂಜುನಾಥ ನಗರ, ಬೆಂಗಳೂರು ಎಂಬವರ ದೂರಿನಂತೆ ದಿನಾಂಕ: 25-10-2022 ರಂದು ಪಿರ್ಯದಿದಾರರು ತನ್ನ ಬಾಬ್ತು ಕೆಎ 02 ಕೆಪಿ 4153 ನೇ ಮೋಟಾರು ಸೈಕಲ್‌ನಲ್ಲಿ ಸಹಸವಾರ ವಿನೋದ್‌ಕುಮಾರ್‌ರನ್ನು ಕುಳ್ಳಿರಿಸಿಕೊಂಡು ಧರ್ಮಸ್ಥಳ ದೇವಸ್ಥಾನಕ್ಕೆ ಹೊರಟು ಮೋಟಾರು ಸೈಕಲ್‌ನ್ನು ಕೊಕ್ಕಡ ಕಡೆಯಿಂದ ಧರ್ಮಸ್ಥಳ ಕಡೆಗೆ ಸವಾರಿ ಮಾಡಿಕೊಂಡು ಬರುತ್ತಿರುವ  ಸಮಯ ಸುಮಾರು ಬೆಳಿಗ್ಗೆ 11.30 ಗಂಟೆಗೆ ಬೆಳ್ತಂಗಡಿ ತಾಲೂಕು ನಿಡ್ಲೆ ಗ್ರಾಮದ ಅರಬೈಲು ಚೆಡಾವು ಎಂಬಲ್ಲಿಗೆ ತಲುಪುತ್ತಿದ್ದಂತೆ ಪಿರ್ಯಾದಿದಾರರ ಹಿಂದಿನಿಂದ ಅಂದರೆ ಕೊಕ್ಕಡ ಕಡೆಯಿಂದ ಧರ್ಮಸ್ಥಳ ಕಡೆಗೆ ಕೆಎ03ಜೆಡ್‌7400 ನೇ ಓಮಿನಿ ಕಾರನ್ನು ಅದರ ಚಾಲಕ ದುಡುಕುತನದಿಂದ ಚಲಾಯಿಸಿಕೊಂಡು ಬಂದು ಪಿರ್ಯಾದಿದಾರರ ಮೋಟಾರು ಸೈಕಲ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದನು ಪರಿಣಾಮ ಪಿರ್ಯಾದಿದಾರರು ಮತ್ತು ಸಹಸವಾರ ಮೋಟಾರು ಸೈಕಲ್‌ ಸಮೇತಾ ರಸ್ತೆಗೆ ಬಿದ್ದು ಪಿರ್ಯಾದಿದಾರರ ಬಲಕೋಲು ಕಾಲಿಗೆ ಗುದ್ದಿದ ಗಾಯ ಹಾಗೂ ಸಹಸವಾರ ವಿನೋದ್‌ರವರಿಗೆ ಎಡಕಾಲಿನ ಪಾದದ ಗಂಟಿಗೆ, ಬಲ ಕೈಯ ತಟ್ಟಿಗೆ, ಬಲ ಕೈಯ ತೋರು ಬೆರಳಿಗೆ ಗುದ್ದಿದ ಗಾಯವಾಗಿದ್ದು ಗಾಯಾಳುಗಳು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹೊರರೋಗಿಯಾಗಿ ಚಿಕಿತ್ಸೆ ಪಡೆದುಕೊಂಡಿರುತ್ತಾರೆ.ಈ ಬಗ್ಗೆ ಬೆಳ್ತಂಗಡಿ ಸಂಚಾರ  ಠಾಣಾ ಅ.ಕ್ರ: 133/2022 ಕಲಂ; 279,337 ಭಾದಂಸಂ  ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 27-10-2022 10:11 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080