ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ: 2

 

ಪುಂಜಾಲಕಟ್ಟೆ ಪೊಲೀಸ್ ಠಾಣೆ: . ಪಿರ್ಯಾದಿದಾರರಾದ ಅಶ್ರಫ್ , ಪ್ರಾಯ: 36 ವರ್ಷ, ತಂದೆ: ಮಹಮ್ಮದ್ , ವಾಸ: ಕೊಡ್ಯೇಲು ಮನೆ, ಮಾಲಾಡಿ  ಗ್ರಾಮ, ಬೆಳ್ತಂಗಡಿ ತಾಲೂಕು ರವರು ದಿನಾಂಕ: 11.05.2022 ರಂದು ತನ್ನ ಬಾಬ್ತು ಆಟೋ ರಿಕ್ಷಾ ನಂಬ್ರ KA21B2131 ನೇದರಲ್ಲಿ ಬಾಡಿಗೆ ನಿಮಿತ್ತ ಮಡಂತ್ಯಾರಿನಿಂದ ಪಣಕಜೆ ಕಡೆಗೆ ಪ್ರಯಾಣಿಕರನ್ನು ಕುಳ್ಳಿರಿಸಿಕೊಂಡು ಮಡಂತ್ಯಾರಿನಿಂದ ಬೆಳ್ತಂಗಡಿ ಕಡೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ತನ್ನ ಬಾಬ್ತು ಆಟೋ ರಿಕ್ಷಾವನ್ನು ಚಲಾಯಿಸಿಕೊಂಡು ಹೋಗುತ್ತಾ ಸಮಯ ಸುಮಾರು ಸಂಜೆ 5.30 ಗಂಟೆಗೆ ಬೆಳ್ತಂಗಡಿ ತಾಲೂಕು ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿಗೆ ತಲುಪಿದಾಗ ಬೆಳ್ತಂಗಡಿ ಕಡೆಯಿಂದ  KA19AC5603 ನೇ  TATA GOODS 407 ಟೆಂಪೋ ಚಾಲಕ ಇಸುಬು ಎಂಬಾತನು ತನ್ನ ಬಾಬ್ತು ಟೆಂಪೋವನ್ನು ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ರಸ್ತೆಯ ತೀರಾ ಬಲಬದಿಗೆ ಚಲಾಯಿಸಿಕೊಂಡು ಬಂದು ಪಿರ್ಯಾದಿದಾರರ ಬಾಬ್ತು ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾ ರಸ್ತೆಯ ಬದಿಯ ಕಚ್ಚಾ ಮಣ್ಣು ರಸ್ತೆಗೆ ಮಗುಚಿ ಬಿದ್ದ ಪರಿಣಾಮ ಪಿರ್ಯಾದಿದಾರರಿಗೆ ಸಣ್ಣಪುಟ್ಟ ತರಚಿದ ಗಾಯವಾಗಿರುವುದಲ್ಲದೇ ಪ್ರಯಾಣಿಕರಾಗಿದ್ದ ಮೋನಮ್ಮ ಹಾಗೂ ಅಪ್ಪಿ ಎಂಬವರುಗಳ ಕಾಲಿಗೆ ಮೂಳೆ ಮುರಿತದ ಗಾಯವುಂಟಾಗಿದ್ದು, ಗಾಯಾಳುಗಳು ಮಂಗಳೂರು ಮಂಗಳಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿದೆ ಈ ಬಗ್ಗೆ ಪುಂಜಾಲಕಟ್ಟೆ ಠಾಣಾ ಅ.ಕ್ರ 30/2022 ಕಲಂ: 279, 338 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಪುತ್ತೂರು ಸಂಚಾರ ಪೊಲೀಸ್ ಠಾಣೆ: . ಪಿರ್ಯಾದಿದಾರರಾದ ಜಯಂತಿ ಎಸ್ ಭಂಡಾರಿ ಪ್ರಾಯ.53 ವರ್ಷ ಗಂಡ: ಶ್ರೀಧರ ಭಂಡಾರಿ ವಾಸ: ಮಾಡಾವು ಮಲೆ ಮನೆ, ಕೆಯ್ಯೂರು ಗ್ರಾಮ, ಮಾಡಾವು ಅಂಚೆ, ಪುತ್ತೂರು ತಾಲೂಕು ರವರು ನೀಡಿದ ದೂರಿನಂತೆ ದಿನಾಂಕ 11-05-2022 ರಂದು 20-00 ಗಂಟೆಗೆ ಆರೋಪಿ ಕಾರು ಚಾಲಕ ರಮೇಶ ಎನ್ ರವರು ನೋಂದಣಿ ನಂಬ್ರ KA-21-M-1710 ಕಾರನ್ನು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಮಂಗಳೂರು ಕಡೆಯಿಂದ ಸಂಪ್ಯ ಕಡೆಗೆ ಚಲಾಯಿಸಿಕೊಂಡು ಹೋಗಿ, ಪುತ್ತೂರು ತಾಲೂಕು ಪುತ್ತೂರು ಕಸಬಾ ಗ್ರಾಮದ ಪರ್ಲಡ್ಕ ಎಂಬಲ್ಲಿ ಪ್ರವೀಣ ಮೋಟಾರ್ ವರ್ಕ್ಸ್ ಬಳಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ರಸ್ತೆಯ ತೀರ ರಾಂಗ್ ಸೈಡ್ ಗೆ ಚಲಾಯಿಸಿದ ಪರಿಣಾಮ, ಶ್ರೀಷ್ ಕುಮಾರ್ ರವರು ಸಂಪ್ಯ ಕಡೆಯಿಂದ ಬಂಟ್ವಾಳ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಮೋಟಾರ್ ಸೈಕಲ್ ನೋಂದಣಿ ನಂಬ್ರ KA-21-EC-1140 ನೇಯದಕ್ಕೆ ಕಾರು ಅಪಘಾತವಾಗಿ, ಮೋಟಾರ್ ಸೈಕಲ್ ಸವಾರನಿಗೆ ಶ್ರೀಷ ಕುಮಾರ್ ರವರಿಗೆ ತಲೆಗೆ, ಬೆನ್ನಿಗೆ, ಮೈ-ಕೈಗಳಿಗೆ ಗುದ್ದಿದ ಹಾಗೂ ರಕ್ತಗಾಯವಾಗಿದ್ದವರನ್ನು ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ಫಸ್ಟ್ ನ್ಯೂರೊ ಆಸ್ಪತ್ರೆಗೆ ದಾಖಲಿಸಲಾಗಿದ್ದು ಈ ಬಗ್ಗೆ ಪುತ್ತೂರು ಸಂಚಾರ ಠಾಣೆ ಅ.ಕ್ರ:  91/2022 ಕಲಂ:279, 337 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಕಳವು ಪ್ರಕರಣ: 1

 

ವೇಣೂರು ಪೊಲೀಸ್ ಠಾಣೆ : ಪಿರ್ಯಾದಿದಾರರಾದ ಶ್ರೀಮತಿ  ಶಾಂತ ಶೆಟ್ಟಿ (60)  ಗಂಡ;: ದಿ| ಓಬಿ ಶೆಟ್ಟಿ   ವಾಸ: ಈಶ್ವರಿ ನಿವಾಸ ಡೊಂಕಬೆಟ್ಟು ,ನಾರಾವಿ ಗ್ರಾಮ, ಬೆಳ್ತಂಗಡಿ ತಾಲೂಕು ರವರು ನೀಡಿದ ದೂರಿನಂತೆ ದಿನಾಂಕ 11.05.2022 ರಂದು ರಾತ್ರಿ 7:00 ಗಂಟೆಯಿಂದ ದಿನಾಂಕ 12.05.2022 ರ ಬೆಳಿಗ್ಗೆ 07:00 ಗಂಟೆಯ ಮಧ್ಯೆ ಅವಧಿಯಲ್ಲಿ ಯಾರೋ ಕಳ್ಳರು ಫಿರ್ಯಾದಿದಾರರ ಮನೆಯಾದ ಬೆಳ್ತಂಗಡಿ ತಾಲೂಕು ನಾರಾವಿ ಗ್ರಾಮದ ಡೊಂಕಬೆಟ್ಟು ಎಂಬಲ್ಲಿರುವ ಮನೆಯಲ್ಲಿ ಯಾರೂ ಇಲ್ಲದ ಸಮಯ ಮನೆಯ ಎದುರಿನ ಬಾಗಿಲಿನ ಬೀಗವನ್ನು ಬಲಾತ್ಕಾರವಾಗಿ ಮುರಿದು ಮನೆಯ ಗೋದ್ರೇಜ್ ಕಪಾಟುಗಳನ್ನು ತೆರೆದು ಕಪಾಟುಗಳಲ್ಲಿದ್ದ ಒಂದು ಜೊತೆ ಚಿನ್ನದ ಬೆಂಡೋಲೆ ಹಾಗೂ ನಗದು ರೂ 35,000/- ಗಳನ್ನು ಕಳವು ಮಾಡಿಕೊಂಡು ಹೋಗಿದ್ದು, ಕಳವಾದ ಚಿನ್ನ ಹಾಗೂ ನಗದು ಸೇರಿ  ಒಟ್ಟು ಮೌಲ್ಯ ಸುಮಾರು 51,500/- ರೂ ಆಗಬಹುದು ಈ ಬಗ್ಗೆ ವೇಣೂರು ಠಾಣಾ ಅ.ಕ್ರ ನಂಬ್ರ 30-2022 ಕಲಂ:457, 380 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಅಸ್ವಾಭಾವಿಕ ಮರಣ ಪ್ರಕರಣ: 1

 

ಬೆಳ್ತಂಗಡಿ ಪೊಲೀಸ್ ಠಾಣೆ : ಪಿರ್ಯಾದಿದಾರರಾದ ರಮೇಶ ನಾಯ್ಕ, ತಂದೆ: ಲಿಂಗಪ್ಪ ನಾಯ್ಕ, ಗುಮಾಸ್ತರು, ಗ್ರಾಮ ಪಂಚಾಯತ್ ಕಛೇರಿ ಉಜಿರೆ ಗ್ರಾಮ, ಬೆಳ್ತಂಗಡಿ ತಾಲೂಕು ರವರಿಗೆ ದಿನಾಂಕ 03-05-2022 ರಂದು ಉಜಿರೆ ಗ್ರಾಮ ಪಂಚಾಯತ್ ಕಛೇರಿಗೆ ಸಾರ್ವಜನಕರೊಬ್ಬರು ದೂರವಾಣಿ ಕರೆ ಮಾಡಿ ಉಜಿರೆ ಕಾಲೇಜು ರಸ್ತೆಯಲ್ಲಿರುವ ರೋಟರಿ ಬಸ್ಸು ನಿಲ್ದಾಣದ ಬಳಿ ಸುಮಾರು 55 ವರ್ಷ ಪ್ರಾಯದ ಅಪರಿಸಿತ ಗಂಡಸು ಯಾವುದೂ ಖಾಯಿಲೆಯಿಂದ ಅಸ್ವಸ್ಥಗೊಂಡು ಬೆಳ್ತಂಗಡಿ 108 ಆಂಬ್ಯುಲೆನ್ ನವರು ಚಿಕಿತ್ಸೆಯ ಬಗ್ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರು ವೆನ್ ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆಗೆ ದಾಖಲಿಸಿ ಚಿಕಿತ್ಸೆಯಲ್ಲಿರುತ್ತಾ ದಿನಾಂಕ 12.05.2022 ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿರುವುವುದಾಗಿದೆ ಈ ಬಗ್ಗೆ ಬೆಳ್ತಂಗಡಿ ಠಾಣಾ ಯುಡಿಆರ್ ನಂ:  22/2022   ಕಲಂ: 174 CRPC ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಇತ್ತೀಚಿನ ನವೀಕರಣ​ : 14-05-2022 11:25 AM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080