ಅಭಿಪ್ರಾಯ / ಸಲಹೆಗಳು

ಸರಗಳ್ಳತನ ಆರೋಪಿಗಳ ಶೀಘ್ರ ಬಂಧನ

     ದಿನಾಂಕ: 08-09-2021 ರಂದು ಮಧ್ಯಾಹ್ನ ಸಮಯ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಪಣೋಲಿಬೈಲು ಬಳಿ ನಡೆದು ಕೊಂಡು ಹೋಗುತ್ತಿದ್ದ ಒಂಟಿ ಮಹಿಳೆ ಶ್ರೀಮತಿ ವತ್ಸಲಾ(53)ರವರ ಕುತ್ತಿಗೆಯಿಂದ ಬೈಕಿನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಚಿನ್ನದ ಕರಿಮಣಿ ಸರವನ್ನು ಬಲವಂತವಾಗಿ ಕಿತ್ತು ಸುಲಿಗೆ ಮಾಡಿ ಪರಾರಿಯಾಗಿದ್ದವರನ್ನು ದಸ್ತಗಿರಿ ಮಾಡಿ ಸುಲಿಗೆ ಮಾಡಿದ್ದ ಚಿನ್ನದ ಕರಿಮಣಿ ಸರವನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಬಂಟ್ವಾಳ ಡಿ.ವೈ.ಎಸ್.ಪಿ ತಂಡ ಹಾಗೂ ಬಂಟ್ವಾಳ‌ ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.


ದಸ್ತಗಿರಿ ಮಾಡಿದ ಆರೋಪಿಗಳು
1) ರೋಹಿತ್, ಪ್ರಾಯ 22 ವರ್ಷ, ತಂದೆ: ದಿ|| ಶೇಖರ ಕುಲಾಲ್, ವಾಸ: ವಲತ್ತಡ್ಕ ಮನೆ, ಆರ್ಯಾಪು ಗ್ರಾಮ ಮತ್ತು ಅಂಚೆ, ಪುತ್ತೂರು ತಾಲೂಕು.
2) ಲೋಹಿತ್ ಪಿ.ಆರ್ @ ಸಚಿನ್ @ ಸಚ್ಚು, ಪ್ರಾಯ 20 ವರ್ಷ, ತಂದೆ: ರಾಮಣ್ಣ ನಾಯ್ಕ, ವಾಸ: ದೇವಸ್ಯ ಮನೆ, ಕುಂಜಿರ್ ಪಂಜ, ಆರ್ಯಾಪು ಗ್ರಾಮ ಮತ್ತು ಅಂಚೆ, ಪುತ್ತೂರು ತಾಲೂಕು ಎಂಬವರಾಗಿರುತ್ತಾರೆ. ಆರೋಪಿಗಳ ವಶದಿಂದ ಅವರುಗಳು ಸುಲಿಗೆ ಮಾಡಿದ ಮಾಂಗಲ್ಯ ಸರವನ್ನು ಹಾಗೂ ಸುಲಿಗೆ ಮಾಡಲು ಉಪಯೋಗಿಸಿದ ಅಪಾಚಿ ಮೋಟಾರು ಸೈಕಲನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಸ್ವಾಧೀನಪಡಿಸಿಕೊಂಡ ಸೊತ್ತುಗಳ ಮೌಲ್ಯ ರೂ 1,35,000/- ಆಗಿರುತ್ತದೆ.

ಈ ಪ್ರಕರಣದ ಪತ್ತೆಯಲ್ಲಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಋಷಿಕೇಷ್ ಭಗವಾನ್ ಸೋನಾವಣೆ ಐ.ಪಿ.ಎಸ್ ರವರ ನಿರ್ದೇಶನದಂತೆ ದ.ಕ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ. ಶಿವಕುಮಾರ್ ಗುಣಾರೆ ರವರ ಮಾರ್ಗದರ್ಶನದಲ್ಲಿ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ವೆಲೈಂಟೈನ್ ಡಿಸೋಜಾರವರ ನೇತ್ರತ್ವದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶ್ರೀ ಟಿ.ಡಿ ನಾಗರಾಜ್ , ಬಂಟ್ವಾಳ ನಗರ ಠಾಣಾ ಪಿ.ಎಸ್.ಐ ಶ್ರೀ ಅವಿನಾಶ್ ಗೌಡ, ಅಪರಾಧ ಪತ್ತೆ ವಿಭಾಗದ ಪಿ.ಎಸ್.ಐ ಕಲೈಮಾರ್, ಬಂಟ್ವಾಳ ಡಿ.ವೈ.ಎಸ್.ಪಿ ತಂಡದ ಉದಯ ರೈ, ಪ್ರವೀಣ್ ಎಂ, ಪ್ರಶಾಂತ್, ಇರ್ಷಾದ್, ಕುಮಾರ್ ಹೆಚ್.ಕೆ, ಹಾಗೂ ಬಂಟ್ವಾಳ ನಗರ ಠಾಣಾ ಸಿಬ್ಬಂದಿಗಳಾದ ಜಗನ್ನಾಥ ಶೆಟ್ಟಿ, ಕೃಷ್ಣ ಕುಲಾಲ್ ಮತ್ತು ಹೋಮ್ ಗಾರ್ಡ್ ಸಿಬ್ಬಂದಿ ಜಯಗಣೇಶ್ ಭಾಗವಹಿಸಿರುತ್ತಾರೆ. ಅತೀ ಶೀಫ್ರವಾಗಿ ಈ ಕ್ಲಿಷ್ಟಕರವಾದ ಪ್ರಕರಣವನ್ನು ಭೇದಿಸಿದ ತಂಡವನ್ನು ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸಿಸಿರುತ್ತಾರೆ.

ಪೋಟೊ

ಇತ್ತೀಚಿನ ನವೀಕರಣ​ : 28-09-2021 12:36 PM ಅನುಮೋದಕರು: Dakshina Kannada District Police


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080